ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಹರ್ಯಾಣ ಮೂಲದ 24 ವರ್ಷದ ಯುವಕ ಮೃತಪಟ್ಟಿದ್ದಾನೆ. ನಿರಂತರ ದಾಳಿಯಿಂದ ಭಾರತೀಯ ಸಮುದಾಯ ಆತಂಕಕ್ಕೆ ಒಳಗಾಗಿದೆ. ವ್ಯಾಂಕೋವರ್ ಪೊಲೀಸ್ ಇಲಾಖೆಯು ಪತ್ರಿಕಾ ಪ್ರಕಟಣೆಯು ಸಾವನ್ನು ದೃಢಪಡಿಸಿದೆ.
ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ವಾಹನದೊಳಗೆ ಯುವಕನ ಮೃತದೇಹ ಪತ್ತೆಯಾಗಿದೆ. ಚಿರಾಗ್ ಅಂತಿಲ್ ಎಂಬ ಭಾರತೀಯ ಮೃತಪಟ್ಟಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ರಾತ್ರಿ ಗುಂಡಿನ ಸದ್ದು ಕೇಳಿಸುತ್ತಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ ಬಳಿಕ ಪೊಲೀಸರು ಪರಿಶೀಲನೆ ನಡೆಸಿ ಕಾರಿನೊಳಗಿದ್ದ ಮೃತದೇಹವನ್ನು ಹೊರತೆಗೆದಿದ್ದಾರೆ. 2022ರಲ್ಲಿ ಓದಲು ವ್ಯಾಂಕೋವರ್‌ಗೆ ಬಂದಿದ್ದ ಚಿರಾಗ್ ಇತ್ತೀಚೆಗೆ ಎಂಬಿಎ ಮುಗಿಸಿದ್ದರು.
ಮೃತದೇಹವನ್ನು ಮನೆಗೆ ತರುವ ಪ್ರಯತ್ನ ನಡೆಯುತ್ತಿದೆ.ಯುವಕನ ಹತ್ಯೆಯ ಹಿಂದಿನ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA