ಸರಗೂರು: ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾದ ಭಾರತದ ಸಂವಿಧಾನವು ಸರ್ವರಿಗೂ ಸಮಬಾಳು–ಸಮಪಾಲು ನೀಡಿದೆ ಎಂದು ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ವೈ.ಡಿ.ರಾಜಣ್ಣ ಎಂದು ತಿಳಿಸಿದರು.
ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ತಾಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯಿತಿ ಪ.ಪಂ. ಹಾಗೂ ಸಮಾಜ ಕಲ್ಯಾಣ ಇಲಾಖೆರವರ ಸಂಯುಕ್ತ ಆಶ್ರಯದಲ್ಲಿ ಬುಧವಾರದಂದು ನಡೆದ ಸಂವಿಧಾನ ಸಮರ್ಪಣಾ ದಿನಾಚರಣೆ ಆಯೋಜಿಸಿದ್ದು, ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿ ಹಾಗೂ ಅಂಬೇಡ್ಕರ್ ಅವರ ಪೋಟೋ ಮತ್ತು ಸಂವಿಧಾನ ಪೀಠಿಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲೂ ಸಹೋದರತೆ ಮೂಡಿಸುವುದಕ್ಕೆ ರಾಷ್ಟ್ರಕ್ಕೆ ಸಂವಿಧಾನ ಅರ್ಪಣೆಗೊಂಡಿರುತ್ತದೆ. ಇದರಿಂದ ದೇಶದ ಎಲ್ಲ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯವನ್ನು, ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು ಸ್ಥಾನ–ಮಾನ ಮತ್ತು ಅವಕಾಶಗಳ ಸಮಾನತೆಯ ಅವಕಾಶ ಲಭಿಸಿದೆ ಎಂದರು.
ಭಾರತೀಯರಾದ ಎಲ್ಲರೂ ವಿಶೇಷವಾಗಿ ವಿದ್ಯಾರ್ಥಿ, ಯುವ ಸಮುದಾಯ ಭಾರತದ ಮೂಲ ಪೀಠಿಕೆಯನ್ನು ಓದಿ ಅರ್ಥಮಾಡಿಕೊಂಡು ದೇಶದಲ್ಲಿ ಎಲ್ಲರೂ ಗೌರವ, ಘನತೆ, ಸ್ವಾಭಿಮಾನದಿಂದ ಬದುಕು ಕಟ್ಟಿಕೊಳ್ಳಬೇಕೆಂದು ತಿಳಿಸಿದರು.
ದಲಿತ ಮುಖಂಡ ನಾಗಣ್ಣ ಮಾತನಾಡಿ, ದೇಶದಲ್ಲಿ ಕೋಮು ಭಾವನೆ, ಪ್ರಜಾಪ್ರಭುತ್ವದ ಅಣಕ, ಸಂವಿಧಾನ ವಿರೋಧಿ ಹೇಳಿಕೆಗಳು ಬರುತ್ತಿವೆ. ಇಂತಹ ಹೇಳಿಕೆ ನೀಡುವವರನ್ನು ಕಾನೂನು ರೀತಿಯಲ್ಲಿ ಶಿಕ್ಷಿಸಲು ಸರಕಾರಗಳು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಂವಿಧಾನ ಉಳಿವಿಗಾಗಿ ಭಾರೀ ಹೋರಾಟಗಳೇ ಆರಂಭವಾಗಿ ಇಡೀ ದೇಶ ಕತ್ತಲ ಕೂಪಕ್ಕೆ ತಳ್ಳಲ್ಪಡುತ್ತವೆ ಎಂದು ಆತಂಕ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ತಹಶೀಲ್ದಾರ್ ಮೋಹನಕುಮಾರಿರವರು ಸಂವಿಧಾನದ ಮೂಲ ಆಶಯಗಳು ಮತ್ತು ಕಾನೂನು ಅಂಶಗಳನ್ನು ಶೇ.75 ಭಾಗದಷ್ಟು ಮಂದಿ ತಿಳಿದುಕೊಳ್ಳದೇ ಇರುವುದರಿಂದ ಸರಕಾರಗಳು ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜಿಸಿದೆ. ಆ ಮೂಲಕ ವಿದ್ಯಾರ್ಥಿ–ಯುವ ಸಮುದಾಯಗಳಿಗೆ ಸಂವಿಧಾನ ಓದುವ, ಚರ್ಚಿಸುವ, ವಿಚಾರ ಸಂಕಿರಣಗಳನ್ನು ಆಯೋಜಿಸಬೇಕೆಂದು ಕಿವಿ ಮಾತು ಹೇಳಿದರು.
ಕಾರ್ಯಕ್ರಮ ಮುನ್ನ ರಥಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಜಯಚಾಮರಾಜೇಂದ್ರ ಕ್ರೀಡಾಂಗಣದಿಂದ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ತ್ರೀ ಧ್ವಜ ಬಾವುಟ ಹಾಗೂ ಅಂಬೇಡ್ಕರ್ ಅವರ ಪೋಟೋ ಹಾಗೂ ಸಂವಿಧಾನ ಪೀಠಿಕೆ ಶಾಲಾ ಮಕ್ಕಳು ಹಿಡಿದುಕೊಂಡು ಮೆರವಣಿಗೆಯಲ್ಲಿ ಸಾಗಿ ತಹಸಿಲ್ದಾರ್ ಕಚೇರಿಯಲ್ಲಿ ಅಂತ್ಯಗೊಂಡಿತು.
ಸಂವಿಧಾನ ದಿನಾಚರಣೆ ಅಂಗವಾಗಿ ಸ್ವರ್ಧೆ ಏರ್ಪಡಿಸಿದ್ದ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಹಾಸಭಾ ಅಧ್ಯಕ್ಷ ಇಟ್ನ ರಾಜಣ್ಣ, ಗ್ಯಾರಂಟಿ ಸಮಿತಿ ಅಧ್ಯಕ್ಷ ಚಲುವರಾಜು, ಅಕ್ರಮ ಸಕ್ರಮ ಸಮಿತಿ ಸದಸ್ಯ ಶಿವಶಂಕರ್, ಪ.ಪಂ.ಅಧ್ಯಕ್ಷ ಶಿವಕುಮಾರ್, ಮಹಾಸಭಾ ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ, ಜಿಪಂ ಮಾಜಿ ಸದಸ್ಯ ಚಿಕ್ಕವೀರನಾಯಕ, ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷ ಗೋಪಾಲಸ್ವಾಮಿ, ಕಸಾಪ ಅಧ್ಯಕ್ಷ ಕೆಂಡಗಣ್ಣಸ್ವಾಮಿ, ಪಪಂ ಸದಸ್ಯ ನೂರಳಾಸ್ವಾಮಿ, ಟ್ರಸ್ಟ್ ಅಧ್ಯಕ್ಷ ನಾಗರಾಜು, ಅಂಬೇಡ್ಕರ್ ಭವನ ಟ್ರಸ್ಟ್ ಅಧ್ಯಕ್ಷ ಎಸ್ ಡಿ ಸಣ್ಣಸ್ವಾಮಿ,ದಸಂಸ (ಅಂಬೇಡ್ಕರ್ ವಾದ) ತಾಲೂಕು ಸಂಚಾಲಕ ಕೂಡಗಿ ಗೋವಿಂದರಾಜು, ಎಸ್ಸಿ ಎಸ್ಟಿ ಸಮಿತಿ ಹಾಗೂ ಗ್ರಾ.ಪಂ. ಸದಸ್ಯ ಬೆಟ್ಟ ಸ್ವಾಮಿ, ಮುಖಂಡರಾದ ಮಲ್ಲೇಶ್, ಹೂವಿನಕೊಳ ಮಹೇಂದ್ರ, ಅಣ್ಣಯ್ಯ ಸ್ವಾಮಿ, ಗೋವಿಂದ, ಗ್ರಂಥಪಾಲಕ ಬಿಡುಗಲು ಶಿವಣ್ಣ, ಬಿಲ್ಲಯ್ಯ, ಪುಟ್ಟ ಹನುಮಯ್ಯ, ಗ್ರಾಮೀಣ ಮಹೇಶ್, ಅಧಿಕಾರಿಗಳ ವರ್ಗ ಇಓ ಪ್ರೇಮ್ ಕುಮಾರ್, ಪ.ಪಂ. ಮುಖ್ಯಾಧಿಕಾರಿ ಎಸ್.ಕೆ.ಸಂತೋಷ ಕುಮಾರ್, ಆರೋಗ್ಯ ಆಡಳಿತಾಧಿಕಾರಿ ಪಾರ್ಥ ಸಾರಥಿ, ಕೆಇಬಿ ಎಇಇ ರಮೇಶ್,ಸಮಾಜ ಕಲ್ಯಾಣ ಇಲಾಖೆ ಮ್ಯಾನೇಜರ್ ವೈ.ಪಿ.ಗುಣಧರ್, ಅಶಿಸ್, ಮಹದೇವಸ್ವಾಮಿ, ಪರಿಶಿಷ್ಟ ಪಂಗಡ ಇಲಾಖೆ ಮ್ಯಾನೇಜರ್ ನಾಗರಾಜು, ಗ್ರೇಟ್ 2 ತಹಶೀಲ್ದಾರ್ ಪರಶಿವಮೂರ್ತಿ, ಉಪ ತಹಶೀಲ್ದಾರ್ ರಾದ ಸುನೀಲ್, ಮನೋಹರ್, ಶಿಕ್ಷಣ ಇಲಾಖೆ ನಾಗೇಂದ್ರಯ್ಯ, ರವಿಚಂದ್ರನ್, ಲಯನ್ಸ್ ಅಕಾಡೆಮಿ ಶಾಲೆ ಮುಖ್ಯ ಶಿಕ್ಷಕ ದಾಸಚಾರಿ, ಪ್ರೌಢ ಶಾಲೆ ಮುಖ್ಯೋಪಾಧ್ಯಾಯ ರಘೋತ್ತಮ, ಕರ್ನಾಟಕ ವಕ್ಫ್ ಪರಿಷತ್ ಸದಸ್ಯ ಸುಭಾನ್, ಚಿನ್ನಣ್ಣ, ಸೋಮಣ್ಣ, ಪ್ರಭಾಕರ್, ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಮುಖಂಡರು ಸೇರಿದಂತೆ ಎಲ್ಲಾ ಶಾಲಾ ಮುಖ್ಯ ಶಿಕ್ಷಕರು ಮತ್ತು ಮಕ್ಕಳು ಹಾಗೂ ದಲಿತ ಸಂಘಟನೆಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


