nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ
    • ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ
    • ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ
    • ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ
    • ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು
    • ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಭಾರತದ ಸಂವಿಧಾನ: ವೈ.ಡಿ.ರಾಜಣ್ಣ
    ರಾಜ್ಯ ಸುದ್ದಿ November 26, 2025

    ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಭಾರತದ ಸಂವಿಧಾನ: ವೈ.ಡಿ.ರಾಜಣ್ಣ

    By adminNovember 26, 2025No Comments2 Mins Read
    sargur

    ಸರಗೂರು:  ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾದ ಭಾರತದ ಸಂವಿಧಾನವು ಸರ್ವರಿಗೂ ಸಮಬಾಳು–ಸಮಪಾಲು ನೀಡಿದೆ ಎಂದು ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ವೈ.ಡಿ.ರಾಜಣ್ಣ ಎಂದು ತಿಳಿಸಿದರು.

    ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ತಾಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯಿತಿ ಪ.ಪಂ. ಹಾಗೂ ಸಮಾಜ ಕಲ್ಯಾಣ ಇಲಾಖೆರವರ ಸಂಯುಕ್ತ ಆಶ್ರಯದಲ್ಲಿ ಬುಧವಾರದಂದು ನಡೆದ ಸಂವಿಧಾನ ಸಮರ್ಪಣಾ ದಿನಾಚರಣೆ ಆಯೋಜಿಸಿದ್ದು, ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿ ಹಾಗೂ ಅಂಬೇಡ್ಕರ್ ಅವರ ಪೋಟೋ ಮತ್ತು ಸಂವಿಧಾನ ಪೀಠಿಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

    ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲೂ ಸಹೋದರತೆ ಮೂಡಿಸುವುದಕ್ಕೆ ರಾಷ್ಟ್ರಕ್ಕೆ ಸಂವಿಧಾನ ಅರ್ಪಣೆಗೊಂಡಿರುತ್ತದೆ. ಇದರಿಂದ ದೇಶದ ಎಲ್ಲ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯವನ್ನು, ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು ಸ್ಥಾನ–ಮಾನ ಮತ್ತು ಅವಕಾಶಗಳ ಸಮಾನತೆಯ ಅವಕಾಶ ಲಭಿಸಿದೆ ಎಂದರು.

    ಭಾರತೀಯರಾದ ಎಲ್ಲರೂ ವಿಶೇಷವಾಗಿ ವಿದ್ಯಾರ್ಥಿ, ಯುವ ಸಮುದಾಯ ಭಾರತದ ಮೂಲ ಪೀಠಿಕೆಯನ್ನು ಓದಿ ಅರ್ಥಮಾಡಿಕೊಂಡು ದೇಶದಲ್ಲಿ ಎಲ್ಲರೂ ಗೌರವ, ಘನತೆ, ಸ್ವಾಭಿಮಾನದಿಂದ ಬದುಕು ಕಟ್ಟಿಕೊಳ್ಳಬೇಕೆಂದು ತಿಳಿಸಿದರು.

    ದಲಿತ ಮುಖಂಡ ನಾಗಣ್ಣ ಮಾತನಾಡಿ, ದೇಶದಲ್ಲಿ ಕೋಮು ಭಾವನೆ, ಪ್ರಜಾಪ್ರಭುತ್ವದ ಅಣಕ, ಸಂವಿಧಾನ ವಿರೋಧಿ ಹೇಳಿಕೆಗಳು ಬರುತ್ತಿವೆ. ಇಂತಹ ಹೇಳಿಕೆ ನೀಡುವವರನ್ನು ಕಾನೂನು ರೀತಿಯಲ್ಲಿ ಶಿಕ್ಷಿಸಲು ಸರಕಾರಗಳು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಂವಿಧಾನ ಉಳಿವಿಗಾಗಿ ಭಾರೀ ಹೋರಾಟಗಳೇ ಆರಂಭವಾಗಿ ಇಡೀ ದೇಶ ಕತ್ತಲ ಕೂಪಕ್ಕೆ ತಳ್ಳಲ್ಪಡುತ್ತವೆ ಎಂದು ಆತಂಕ ವ್ಯಕ್ತಪಡಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ತಹಶೀಲ್ದಾರ್ ಮೋ‌ಹನಕುಮಾರಿರವರು ಸಂವಿಧಾನದ ಮೂಲ ಆಶಯಗಳು ಮತ್ತು ಕಾನೂನು ಅಂಶಗಳನ್ನು ಶೇ.75 ಭಾಗದಷ್ಟು ಮಂದಿ ತಿಳಿದುಕೊಳ್ಳದೇ ಇರುವುದರಿಂದ ಸರಕಾರಗಳು ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜಿಸಿದೆ. ಆ ಮೂಲಕ ವಿದ್ಯಾರ್ಥಿ–ಯುವ ಸಮುದಾಯಗಳಿಗೆ ಸಂವಿಧಾನ ಓದುವ, ಚರ್ಚಿಸುವ, ವಿಚಾರ ಸಂಕಿರಣಗಳನ್ನು ಆಯೋಜಿಸಬೇಕೆಂದು ಕಿವಿ ಮಾತು ಹೇಳಿದರು.

    ಕಾರ್ಯಕ್ರಮ ಮುನ್ನ ರಥಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಜಯಚಾಮರಾಜೇಂದ್ರ ಕ್ರೀಡಾಂಗಣದಿಂದ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ತ್ರೀ ಧ್ವಜ ಬಾವುಟ ಹಾಗೂ ಅಂಬೇಡ್ಕರ್ ಅವರ ಪೋಟೋ ಹಾಗೂ ಸಂವಿಧಾನ ಪೀಠಿಕೆ ಶಾಲಾ ಮಕ್ಕಳು ಹಿಡಿದುಕೊಂಡು ಮೆರವಣಿಗೆಯಲ್ಲಿ ಸಾಗಿ ತಹಸಿಲ್ದಾರ್ ಕಚೇರಿಯಲ್ಲಿ ಅಂತ್ಯಗೊಂಡಿತು.

    ಸಂವಿಧಾನ ದಿನಾಚರಣೆ ಅಂಗವಾಗಿ ಸ್ವರ್ಧೆ ಏರ್ಪಡಿಸಿದ್ದ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಹಾಸಭಾ ಅಧ್ಯಕ್ಷ ಇಟ್ನ ರಾಜಣ್ಣ, ಗ್ಯಾರಂಟಿ ಸಮಿತಿ ಅಧ್ಯಕ್ಷ ಚಲುವರಾಜು, ಅಕ್ರಮ ಸಕ್ರಮ ಸಮಿತಿ ಸದಸ್ಯ ಶಿವಶಂಕರ್, ಪ.ಪಂ.ಅಧ್ಯಕ್ಷ ಶಿವಕುಮಾರ್, ಮಹಾಸಭಾ ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ, ಜಿಪಂ ಮಾಜಿ ಸದಸ್ಯ ಚಿಕ್ಕವೀರನಾಯಕ, ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷ ಗೋಪಾಲಸ್ವಾಮಿ, ಕಸಾಪ ಅಧ್ಯಕ್ಷ ಕೆಂಡಗಣ್ಣಸ್ವಾಮಿ, ಪಪಂ ಸದಸ್ಯ ನೂರಳಾಸ್ವಾಮಿ, ಟ್ರಸ್ಟ್ ಅಧ್ಯಕ್ಷ ನಾಗರಾಜು, ಅಂಬೇಡ್ಕರ್ ಭವನ ಟ್ರಸ್ಟ್ ಅಧ್ಯಕ್ಷ ಎಸ್ ಡಿ ಸಣ್ಣಸ್ವಾಮಿ,ದಸಂಸ (ಅಂಬೇಡ್ಕರ್ ವಾದ) ತಾಲೂಕು ಸಂಚಾಲಕ ಕೂಡಗಿ ಗೋವಿಂದರಾಜು, ಎಸ್ಸಿ ಎಸ್ಟಿ ಸಮಿತಿ  ಹಾಗೂ ಗ್ರಾ.ಪಂ. ಸದಸ್ಯ ಬೆಟ್ಟ ಸ್ವಾಮಿ, ಮುಖಂಡರಾದ ಮಲ್ಲೇಶ್, ಹೂವಿನಕೊಳ ಮಹೇಂದ್ರ, ಅಣ್ಣಯ್ಯ ಸ್ವಾಮಿ, ಗೋವಿಂದ, ಗ್ರಂಥಪಾಲಕ ಬಿಡುಗಲು ಶಿವಣ್ಣ, ಬಿಲ್ಲಯ್ಯ, ಪುಟ್ಟ ಹನುಮಯ್ಯ, ಗ್ರಾಮೀಣ ಮಹೇಶ್, ಅಧಿಕಾರಿಗಳ ವರ್ಗ ಇಓ ಪ್ರೇಮ್ ಕುಮಾರ್, ಪ.ಪಂ. ಮುಖ್ಯಾಧಿಕಾರಿ ಎಸ್.ಕೆ.ಸಂತೋಷ ಕುಮಾರ್, ಆರೋಗ್ಯ ಆಡಳಿತಾಧಿಕಾರಿ ಪಾರ್ಥ ಸಾರಥಿ, ಕೆಇಬಿ ಎಇಇ ರಮೇಶ್,ಸಮಾಜ ಕಲ್ಯಾಣ ಇಲಾಖೆ ಮ್ಯಾನೇಜರ್ ವೈ.ಪಿ.ಗುಣಧರ್, ಅಶಿಸ್, ಮಹದೇವಸ್ವಾಮಿ, ಪರಿಶಿಷ್ಟ ಪಂಗಡ ಇಲಾಖೆ ಮ್ಯಾನೇಜರ್ ನಾಗರಾಜು, ಗ್ರೇಟ್ 2 ತಹಶೀಲ್ದಾರ್ ಪರಶಿವಮೂರ್ತಿ, ಉಪ ತಹಶೀಲ್ದಾರ್ ರಾದ ಸುನೀಲ್, ಮನೋಹರ್, ಶಿಕ್ಷಣ ಇಲಾಖೆ ನಾಗೇಂದ್ರಯ್ಯ, ರವಿಚಂದ್ರನ್, ಲಯನ್ಸ್ ಅಕಾಡೆಮಿ ಶಾಲೆ ಮುಖ್ಯ ಶಿಕ್ಷಕ ದಾಸಚಾರಿ, ಪ್ರೌಢ ಶಾಲೆ ಮುಖ್ಯೋಪಾಧ್ಯಾಯ ರಘೋತ್ತಮ, ಕರ್ನಾಟಕ ವಕ್ಫ್ ಪರಿಷತ್ ಸದಸ್ಯ ಸುಭಾನ್, ಚಿನ್ನಣ್ಣ, ಸೋಮಣ್ಣ, ಪ್ರಭಾಕರ್, ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಮುಖಂಡರು ಸೇರಿದಂತೆ ಎಲ್ಲಾ ಶಾಲಾ ಮುಖ್ಯ ಶಿಕ್ಷಕರು ಮತ್ತು ಮಕ್ಕಳು ಹಾಗೂ ದಲಿತ ಸಂಘಟನೆಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!

    October 12, 2026

    “30 ನಾಯಕರಿಗೆ ಕೋಟಿ ಕೋಟಿ ಕೊಟ್ಟಿದ್ದೇನೆ” ಎಂದ ಪ್ರದೀಪ್ ಈಶ್ವರ್! ಕಾಂಗ್ರೆಸ್‌ ನಲ್ಲಿ ಭಿನ್ನಮತ ಸ್ಫೋಟ

    October 11, 2026

    Leave A Reply Cancel Reply

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ತುಮಕೂರು ದಸರಾ–2026 ಉತ್ಸವದ ಅಂಗವಾಗಿ ಜಿಲ್ಲಾಡಳಿತದಿಂದ ಆಯೋಜಿಸಲು ಉದ್ದೇಶಿಸಲಾಗಿದ್ದ ಹೆಲಿಕ್ಯಾಪ್ಟರ್ ರೈಡ್ ಗೆ (Helicopter Ride) ತುಮಕೂರು ವಿಶ್ವವಿದ್ಯಾನಿಲಯವು…

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.