ಮಹಿಳೆಯರು ಹಾಗೂ ಶೋಷಿತ ಸಮುದಾಯಗಳಿಗೆ ಮೊದಲ ಬಾರಿಗೆ ಶಿಕ್ಷಣ ನೀಡುವ ಮೂಲಕ ಭಾರತದ ಮೊಟ್ಟ ಮೊದಲ ಶಿಕ್ಷಕಿಯಾದ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆಯನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತಿದೆ.
ಇವರು ಸಮಾಜದ ಅನಿಷ್ಟ ಪದ್ದತಿಗಳಾದ ಬಾಲ್ಯ ವಿವಾಹ , ಸತಿಸಹಗಮನ ಪದ್ದತಿ , ಕೇಶ ಮುಂಡೆನೆ , ವಿರುದ್ದ ಹೋರಾಟ ಮಾಡಿದ ದಿಟ್ಟ ಮಹಿಳೆಯಾಗಿದ್ದಾರೆ. ಮಹಿಳೆಯರಿಗಾಗಿ ಪ್ರಪ್ರಥಮವಾಗಿ ಶಾಲೆಗಳು, ಅಬಲಾಶ್ರಮ, ಸ್ಥಾಪನೆ ಮಾಡಿದ ಕೀರ್ತಿ ಇವರಿಗೆ ಸಲ್ಲುತ್ತದೆ.
ಸಾವಿತ್ರಿಬಾಯಿ ಶ್ರೀ ಭಿಡೆಯವರ ಮನೆಯಲ್ಲಿ ಆರಂಭಗೊಂಡ ಕನ್ಯಾಶಾಲೆಯ ಪ್ರಧಾನ ಶಿಕ್ಷಕಿಯಾದರು. ಆ ಕಾಲದಲ್ಲಿ ಸ್ರ್ರೀಯೊಬ್ಬಳು ಶಿಕ್ಷಕಿಯಾಗುವುದು ಧರ್ಮಕ್ಕೂ, ಸಮಾಜಕ್ಕೂ ದ್ರೋಹ ಬಗೆದಂತೆ ಎಂದು ಅವರನ್ನು ಪಾಠಶಾಲೆಗೆ ಹೊರಟಾಗ ಕೆಲವರು ಕೇಕೇ ಹಾಕಿ ನಗುತ್ತಿದ್ದರು, ಅವರ ಮೇಲೆ ಕೆಸರು, ಸಗಣಿ ಎರಚಿ, ಕಲ್ಲನೂ ತೂರುತ್ತಿದ್ದರು. ಇದರಿಂದ ಧೃತಿಗೆಡದ ಸಾವಿತ್ರಿಬಾಯಿಯವರು ಯಾವಾಗಲೂ ಒಂದು ಸೀರೆಯೊಂದನ್ನು ತಮ್ಮ ಬ್ಯಾಗಿನಲ್ಲಿ ಇಟ್ಟುಕೊಳ್ಳುತ್ತಿದ್ದರು.
ದಾರಿಯಲ್ಲಿ ಕೆಸರು, ಸಗಣಿ ಎರಚಿಸಿಕೊಂಡಾಗ, ಬೇಸರಗೊಳ್ಳದೇ ತಮ್ಮ ಶಿಕ್ಷಣದ ಕ್ರಾಂತಿಯನ್ನು ಮುಂದುವರಿಸಿದರು. ಬೀದಿಯಲ್ಲಿ ಮನುವಾದಿಗಳು ಕೆಸರು, ಸೆಗಣಿ ಎರಚುತ್ತಿದ್ದ ಕಾರಣ ಅವರು, ಶಾಲೆಯಲ್ಲಿ ಮಕ್ಕಳು ಬರುವುದರೊಳಗೆ ಬ್ಯಾಗಿನಲ್ಲಿ ಇಟ್ಟುಕೊಂಡಿರುತ್ತಿದ್ದ ಮತ್ತೊಂದು ಸೀರೆಯನ್ನು ಉಟ್ಟುಕೊಂಡು ಪಾಠಕ್ಕೆ ಸಿದ್ಧರಾಗುತ್ತಿದ್ದರು. 1848 ರಿಂದ 1852ರ ಅವಧಿಯಲ್ಲಿ 18 ಪಾಠಶಾಲೆಗಳನ್ನು ಫುಲೆ ದಂಪತಿಗಳು ತೆರೆದರು.
ಈ ಪಾಠಶಾಲೆಗಳ ಆಡಳಿತದ ಜವಾಬ್ದಾರಿಯನ್ನು ಸಾವಿತ್ರಿಬಾಯಿ ನಿರ್ವಹಿಸಬೇಕಾಗಿತ್ತು. ಶಿಕ್ಷಕಿ, ಸಂಚಾಲಕಿ, ಮುಖ್ಯೋಪಾಧ್ಯಾಯಿನಿ ಮುಂತಾದ ಕೆಲಸಗಳನ್ನು ಇವರು ಸಮರ್ಪಕವಾಗಿ ನಿಭಾಯಿಸುವುದರ ಮೂಲಕ ಅವರ ಪತಿ ಜ್ಯೋತಿಬಾಫುಲೆ ಅವರಿಗೆ ನೆರವಾದರು. ಬ್ರಿಟಿಷ್ ಸರ್ಕಾರದವರು ಅವರ ಕೆಲಸ ಕಾರ್ಯಗಳನ್ನು ಕೂಲಂಕುಷವಾಗಿ ಅವಲೋಕಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದರು.
ಇಂದು ಭಾರತದ ಮಹಿಳೆಯರ ಸಮಾಜದ ಎಲ್ಲಾ ಕ್ಷೇತ್ರದಲ್ಲಿ ಸಮಾನತೆಯ ಹಕ್ಕಿಗೆ ಕಾರಣರಾದವರು ಮಾತೆ ಸಾವಿತ್ರಿ ಬಾಪುಲೆ. ಇವರು ಸಮಾಜದ ಅನಿಷ್ಟ ಪದ್ದತಿಗಳಾದ ಬಾಲ್ಯ ವಿವಾಹ, ಸತಿಸಹಗಮನ ಪದ್ದತಿ, ಕೇಶ ಮುಂಡನೆ ವಿರುದ್ದ ಹೋರಾಟ ಮಾಡಿ, ಮಹಿಳೆಯರಿಗೋಸ್ಕರ ಪ್ರ ಪ್ರಥಮವಾಗಿ ಶಾಲೆಗಳು, ಅಬಲಾಶ್ರಮ ಸ್ಥಾಪನೆ ಮಾಡಿದರು.
ಶಿಕ್ಷಣ ಕ್ಷೇತ್ರದಲ್ಲಿ ಇವರ ಸಾಧನೆ ಪರಿಗಣಿಸಿ , ಬ್ರಿಟಿಷ್ ಸರಕಾರ ಇವರಿಗೆ “ಇಂಡಿಯಾಸ್ ಫಸ್ಟ್ ಲೇಡಿ ಟೀಚರ್” ಎಂದು ಬಿರುದು ಕೂಡ ಕೊಟ್ಟಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz