nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ

    June 30, 2026

    ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    June 30, 2026

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026
    Facebook Twitter Instagram
    ಟ್ರೆಂಡಿಂಗ್
    • ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
    • ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
    • ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
    • ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
    • ಗಾಂಜಾ ಮಾರಾಟ ಜಾಲ: ಇಬ್ಬರು ಆರೋಪಿಗಳಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ
    • ತುರುವೇಕೆರೆ: ವಿದ್ಯುತ್ ಖಾಸಗಿಕರಣ ತಿರಸ್ಕರಿಸಲು ಒತ್ತಾಯಿಸಿ ರೈತ ಸಂಘದಿಂದ ಮನವಿ
    • ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    ಜಿಲ್ಲಾ ಸುದ್ದಿ June 30, 2026

    ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    By adminJune 30, 2026No Comments2 Mins Read
    shubha kalyan.jpg

    Provided by
    Provided by

    ಗುಬ್ಬಿ: ರೈತರ ಸಮಸ್ಯೆಯನ್ನು ಆಲಿಸಲು ಕಂದಾಯ ಅಧಿಕಾರಿಗಳು ಪ್ರತಿನಿತ್ಯ ಪೋತಿ ಖಾತೆ ಅಭಿಯಾನವನ್ನು ನಡೆಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

    ಕಡಬ ಹೋಬಳಿ ಕೊಪ್ಪ ಗ್ರಾಮ ಪಂಚಾಯತ್ನಲ್ಲಿ ನಡೆಯುತ್ತಿದ್ದ ಪೋತಿ ಖಾತೆ ಆಂದೋಲನಕ್ಕೆ ಆಗಮಿಸಿ ಮಾತನಾಡಿದ ಅವರು ಕಂದಾಯ ಸಚಿವರು, ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರ ಸೂಚನೆಯ ಮೇರೆಗೆ ಸಾರ್ವಜನಿಕ ಸಮಸ್ಯೆಗಳಿದ್ದಲ್ಲಿ ನೇರವಾಗಿ ತೆರಳಿ ಸಮಸ್ಯೆಗಳನ್ನು ಆಲಿಸುವಂತೆ ಸೂಚಿಸಿದ ಹಿನ್ನೆಲೆ ಗುಬ್ಬಿ ತಾಲೂಕಿನಲಿ ಪ್ರವಾಸ ಮಾಡುತ್ತಿದ್ದು, ಕಂದಾಯ ಇಲಾಖೆ ವತಿಯಿಂದ ಪೋತಿ ಖಾತೆ ಆಂದೋಲನ ಅಭಿಯಾನ ಮಾಡಲಾಗುತ್ತಿದೆ. ಜಿಲ್ಲೆಯ 34 ಹೋಬಳಿಗಳಲ್ಲಿ 6 ಸಾವಿರ ಬಾಕಿ ಇದ್ದು ಜಿಲ್ಲೆಯಲ್ಲಿ ಯಾರು ಅಲೆದಾಟ ಮಾಡದಂತೆ ಮಾಡುವ ನಿಟ್ಟಿನಲ್ಲಿ ರೈತರ ಮನೆಗೆ ಹೋಗಿ ಮನವೊಲಿಸುವ ಕೆಲಸ ಮಾಡಬೇಕಿದೆ. ಪೋತಿ ಖಾತೆಗೆ ವಂಶವೃಕ್ಷ, ಮರಣ ಪ್ರಮಾಣ ಪತ್ರ, ಆಧಾರ್ ನೀಡುವಂತೆ ಮಾಹಿತಿ ನೀಡಿ ವಂಶವೃಕ್ಷವನ್ನು ನಾಡ ಕಚೇರಿಯಲ್ಲಿ ನೀಡಲಿದ್ದು, ಇದರಿಂದ ವಂಚಿತರಾದರೆ ಸಿವಿಲ್ ಗೆ ಹೋಗಬೇಕಾಗುತ್ತದೆ ಎಂದು ಅರಿವು ಮೂಡಿಸುವ ಕೆಲಸ ಆಗಬೇಕಿದೆ. ಪೋತಿ ಖಾತೆ ಬಗ್ಗೆ ಪ್ರತಿನಿತ್ಯ ರಿವೀವ್ ಮಾಡಲಾಗುತ್ತಿದ್ದು, ಡಿಸೆಂಬರ್ ಒಳಗಾಗಿ ಸಂಪೂರ್ಣವಾಗಿ ಮುಗಿಸುವ ಆಶಯವಿದೆ. ಪೋತಿ ಖಾತೆ ಮಾಡಿಸಿಕೊಳ್ಳದೆ ಹೋದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಸಿಗುವ ಸೌಲಭ್ಯಗಳಿಂದ ವಂಚಿತರಾಗುವರು, ಈಗಾಗಲೇ ಒಂದುವರೆ ಲಕ್ಷ ಪೋತಿ ಖಾತೆ ಆಗಿದ್ದು, ಕಂದಾಯ ಗ್ರಾಮವನ್ನು ಮಾಡಿ ಗಿನ್ನಿಸ್ ಬುಕ್ ನಲ್ಲಿ ದಾಖಲು ಆಗಿದೆ ಎಂದು ತಿಳಿಸಿದರು.

    ಜೂನ್ 30 ರಿಂದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಆರಂಭ ಆಗಲಿದ್ದು, ಆಯಾ ಬಿ ಎಲ್ ಓ ಗಳು ಮತದಾರರ ಮನೆ ಮನೆಗೆ ತೆರಳಿ ಅವರಿಗೆ ಎರಡು ಫಾರಂ ನೀಡಿ ಅದನ್ನು ತುಂಬಲು ಸಹರಿಸುತ್ತಾರೆ ಈಗಾಗಲೇ ಈ ಬಗ್ಗೆ ಇವರಿಗೆ ತರಬೇತಿ ನೀಡಲಾಗಿದೆ ಎಂದರು.

    ಜೊತೆಗೆ ಈಗಾಗಲೇ ಮಾಧ್ಯಮ ಪ್ರತಿನಿಧಿಗಳೊಂದಿಗೆ ರಾಜಕೀಯ ಪಕ್ಷದ ಪ್ರತಿನಿಧಿಗಳೊಂದಿಗೆ ಸಭೆಯನ್ನು ಮಾಡಿ ಅರಿವು ಮೂಡಿಸುವ ಕಾರ್ಯವನ್ನು ಜಿಲ್ಲೆಯಲ್ಲಿ ತಾಲೂಕಿನಲ್ಲಿಯೂ ಮಾಡಿದ್ದು, ಬಿಎಲ್ ಒ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಎನಿಮಿರೆಷನ್ ಫಾರಂ ಎರಡೆರಡು ನೀಡಲಿದ್ದು, ಅದನ್ನು ಭರ್ತಿ ಮಾಡುವ ಬಗ್ಗೆ ಕಾರ್ಯಗಾರವನ್ನು ಮಾಡಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ 98.4 ರಷ್ಟು ಪ್ರೋಲಜಿನಿ ಮ್ಯಾಪಿಂಗ್ ಆಗಿದ್ದು, ಆಗಿರುವವರು ಯಾರು ಸಹ ಮತ್ತೆ ಯಾವುದೇ ದಾಖಲೆಗಳನ್ನು ನೀಡುವ ಅವಶ್ಯಕತೆ ಇಲ್ಲ. ಎನಿಮಿರೆಷನ್ ಫಾರಂ ಅನ್ನು ಭರ್ತಿ ಮಾಡಿ ಕೊಡದೆ ಹೋದಲಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಆಗುವುದಿಲ್ಲ, ಪ್ರತಿಯೊಬ್ಬ ಮತದಾರರು ಸಹ ಅರ್ಜಿಯನ್ನು ಭರ್ತಿ ಮಾಡಿ ಕೊಡಬೇಕು. 10 ದಿನಗಳ ಕಾಲಾವಧಿ ಯೊಳಗೆ ಫಾರಂ ಅನ್ನು ಮತದಾರರ ಮನೆಗೆ ತಲುಪಿಸುವಂತೆ ಸೂಚನೆ ನೀಡಿದ್ದು, ಈ ಬಗ್ಗೆ ಗ್ರಾಮ ಪಂಚಾಯಿತಿ ವತಿಯಿಂದ ಪ್ರಚಾರ ಮಾಡಲಾಗುತ್ತಿದೆ. ಇದು ಪ್ರತಿ ಬಾರಿ ಮಾಡುವ ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯ ಅಲ್ಲ, ವಿಶೇಷ ಸಮಗ್ರ ಮತದಾರರ ಪರಿಷ್ಕರಣೆ ಇದಾಗಿದ್ದು, ಜಿಲ್ಲೆಯಲ್ಲಿ 28 ಲಕ್ಷ ಮತದಾರರು ಇದ್ದು ಯಾರು ಸಹ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ ಅವರು ಬೆಸ್ಕಾಂ ಐಇಇ ಅಧಿಕಾರಿಗಳು ವಾರಕ್ಕೊಮ್ಮೆ ವಿದ್ಯುತ್ ನೀಡುತ್ತಿರುವ ಬಗ್ಗೆ ತಾವೇ ಹಾಜರಾಗಿ ಮಾಹಿತಿ ಕೊಡುವಂತೆ ತಿಳಿಸಲಾಗಿದೆ ಎಂದು ತಿಳಿಸಿದರು.


    Provided by
    Provided by

    ಈಗಾಗಲೇ ಜಿಲ್ಲೆಯಲ್ಲಿ 98.4 ರಷ್ಟು ಪ್ರೋಲಜಿನಿ ಮ್ಯಾಪಿಂಗ್ ಆಗಿದ್ದು, ಆಗಿರುವವರು ಯಾರು ಸಹ ಮತ್ತೆ ಯಾವುದೇ ದಾಖಲೆಗಳನ್ನು ನೀಡುವ ಅವಶ್ಯಕತೆ ಇಲ್ಲ. ಎನಿಮಿರೆಷನ್ ಫಾರಂ ಅನ್ನು ಭರ್ತಿ ಮಾಡಿ ಕೊಡದೆ ಹೋದಲಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಆಗುವುದಿಲ್ಲ, ಪ್ರತಿಯೊಬ್ಬ ಮತದಾರರು ಸಹ ಅರ್ಜಿಯನ್ನು ಭರ್ತಿ ಮಾಡಿ ಕೊಡಬೇಕು. 10 ದಿನಗಳ ಕಾಲಾವಧಿ ಯೊಳಗೆ ಫಾರಂ ಅನ್ನು ಮತದಾರರ ಮನೆಗೆ ತಲುಪಿಸುವಂತೆ ಸೂಚನೆ ನೀಡಿದ್ದು, ಈ ಬಗ್ಗೆ ಗ್ರಾಮ ಪಂಚಾಯಿತಿ ವತಿಯಿಂದ ಪ್ರಚಾರ ಮಾಡಲಾಗುತ್ತಿದೆ ಎಂದರು.

    ಈ ಸಂದರ್ಭದಲ್ಲಿ ಗುಬ್ಬಿ ತಹಶೀಲ್ದಾರ್, ತಾ.ಪಂ ಇಒ ಸರ್ವೆ ಎ ಡಿ ಎಲ್ ಆರ್ ತಿ ಪಿಡಿಒ, ಗ್ರಾಮ ಆಡಳಿತಾಧಿಕಾರಿಗಳು ಗ್ರಾ.ಪಂ ಮಾಜಿ ಸದಸ್ಯ ರಮೇಶ್ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ

    June 29, 2026

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಾ. ಜಿ. ಪರಮೇಶ್ವರ್ ಭೇಟಿ

    June 29, 2026

    ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ

    June 28, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ

    June 30, 2026

    ತುಮಕೂರು: ನಗರದ ಕೆಇಬಿ ಇಂಜಿನಿಯರ್ಸ್ ಅಸೋಸಿಯೇಷನ್ ಆವರಣದಲ್ಲಿ ಅಮಾಯಕ ದಲಿತ ಕಾರ್ಮಿಕರಿಂದ ಮಲಗುಂಡಿ ಸ್ವಚ್ಛ ಮಾಡಿಸಿದ ಹೇಯ ಕೃತ್ಯ ನಡೆದಿದೆ.…

    ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    June 30, 2026

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026

    ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು

    June 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.