ಆರಂಭದಲ್ಲಿ ಲಕ್ಷಾಂತರ ಬಡವರ ಹೊಟ್ಟೆ ತುಂಬಿಸಿದ್ದ ಕ್ಯಾಂಟೀನ್ಗಳು ಬಿಬಿಎಂಪಿ ನಿರ್ಲಕ್ಷ್ಯದಿಂದ ಸೊರಗಿವೆ. ಸಿಎಂ ಸಿದ್ದರಾಮಯ್ಯ ಸರ್ಕಾರ ಇರುವಾಗಲೇ ಸಿಎಂ ಕನಸಿನ ಯೋಜನೆಯಾಗಿರುವ ಇಂದಿರಾ ಮೊಬೈಲ್ ಕ್ಯಾಂಟೀನ್ ಗಳ ಸೇವೆ ಮರೆಯಾಗುತ್ತಿದೆ. ಮೊಬೈಲ್ ಕ್ಯಾಂಟೀನ್ ಗಳ ಸದ್ಯದ ಸ್ಥಿತಿಯ ಬಗ್ಗೆ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಜಯನಗರದ 9ನೇ ಬ್ಲಾಕ್ ನಲ್ಲಿರುವ ಸಂಚಾರಿ ಇಂದಿರಾ ಮೊಬೈಲ್ ಕ್ಯಾಂಟೀನ್ ನ ಡೋರ್ ಮುರಿದು ಹೋಗಿದೆ.
ವಸ್ತುಗಳು ಎಲ್ಲಂದರಲ್ಲಿ ಬಿದ್ದಿದ್ದಾವೇ, ಸ್ವಚ್ಛತೆಯೇ ಮರೀಚಿಕೆಯಾಗಿದೆ. ಇಲ್ಲಿನ ಇಂದಿರಾ ಮೊಬೈಲ್ ಕ್ಯಾಂಟೀನ್ ದುಸ್ಥಿತಿಗೆ ತಲುಪಿದ್ದು ಹಿಗೆಯೇ ಜನರಿಗೆ ಊಟ-ತಿಂಡಿ ಪೂರೈಕೆ ಮಾಡಲಾಗ್ತಿದೆ. ಚಾಮರಾಜಪೇಟೆಯ ಹನುಮಂತನಗರದಲ್ಲಿ ಎರಡು ವರ್ಷದಿಂದ ಇಂದಿರಾ ಮೊಬೈಲ್ ಕ್ಯಾಂಟೀನ್ ನಿಂತಲ್ಲೇ ನಿಂತಿದೆ. ಗಾಡಿ ತುಕ್ಕು ಹಿಡಿದಿದ್ದು ಗುಜರಿಗೆ ಸೇರುವಂತಾಗಿದೆ. ಶ್ರೀನಗರ ಬಸ್ ನಿಲ್ದಾಣದಲ್ಲಿ ಸಾವಿರಾರು ಜನರಿಗೆ ಈ ಕ್ಯಾಂಟೀನ್ ಉಪಯೋಗವಾಗ್ತಿತ್ತು. ಕಳೆದ ಎರಡು ವರ್ಷದ ಹಿಂದೆ ಸ್ಥಗಿತಗೊಂಡಿದ್ದು ಬಡವರು ಊಟಕ್ಕೆ ಪರದಾಡುವಂತಾಗಿದೆ. ಬಿಬಿಎಂಪಿ ಅಧಿಕಾರಿಗಳ ಅಸಡ್ಡೆಯೇ ಇದ್ದಕ್ಕೆ ಕಾರಣ ಎಂದು ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಟ್ಟಿನಲ್ಲಿ ಸುಮಾರು 16 ಇಂದಿರಾ ಮೊಬೈಲ್ ಕ್ಯಾಂಟೀನ್ ಗಳು ನಿರ್ವಾಹಣೆ ಕೊರತೆಯಿಂದ ಕೆಟ್ಟು ಹೋಗಿದ್ವು. ಕಳೆದ ವರ್ಷ ಆಗಸ್ಟ್ ನಲ್ಲಿ ದುರಸ್ತಿ ಮಾಡಿ ಮರು ಆರಂಭಕ್ಕೆ ಸರ್ಕಾರ ಸೂಚಿಸಿತ್ತು. ಅದರಂತೆ ಬಿಬಿಎಂಪಿ 1.22 ಕೋಟಿ ರೂಪಾಯಿ ಖರ್ಚು ಮಾಡ್ತೀವಿ ಅಂದಿತ್ತು. ಆದರೆ ಅವುಗಳ ಸ್ಥಿತಿ ಮಾತ್ರ ಇನ್ನೂ ಸರಿಯಾಗಿಲ್ಲ. ಜನರ ಉಪಯೋಗಕ್ಕೆ ಬಾರದೇ ಮೂಲೆ ಸೇರಿದ್ರೆ, ಓಪನ್ ಇರುವ ಕಡೆ ಸ್ವಚ್ಚತೆಯೇ ಮಾಯವಾಗಿದೆ ಎಂದು ಹೇಳಲಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


