ನವದೆಹಲಿ: ಮುಂಬರುವ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರು ಆಗಮಿಸಲಿದ್ದಾರೆ ಎನ್ನಲಾಗಿದೆ.
ಈ ವರ್ಷದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯನ್ನು ಭಾರತ ಇನ್ನೂ ಅಧಿಕೃತವಾಗಿ ಘೋಷಿಸಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭೇಟಿಯ ವೇಳೆ ಸುಬಿಯಾಂಟೋ ಅವರೊಂದಿಗೆ ವ್ಯಾಪಕ ಮಾತುಕತೆ ನಡೆಸಲಿದ್ದಾರೆ. ಪ್ರತಿ ವರ್ಷ ಭಾರತವು ವಿಶ್ವ ನಾಯಕರನ್ನು ಗಣರಾಜ್ಯೋತ್ಸವಕ್ಕೆ ಆಹ್ವಾನಿಸುತ್ತದೆ. ಕಳೆದ ವರ್ಷ ಫ್ರೆಂಚ್ ಅಧ್ಯಕ್ಷ ಇವ್ಯಾನುಯೆಲ್ ವ್ಯಾಕ್ರನ್ ಮುಖ್ಯ ಅತಿಥಿಯಾಗಿದ್ದರು. ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್–ಸಿಸಿ ಅವರು 2023 ರಲ್ಲಿ ಈ ಸಂದರ್ಭವನ್ನು ಅಲಂಕರಿಸಿದರು.
ಕೋವಿಡ್–19 ಸಾಂಕ್ರಾಮಿಕದ ದಷ್ಟಿಯಿಂದ 2021 ಮತ್ತು 2022 ರಲ್ಲಿ ಗಣರಾಜ್ಯೋತ್ಸವದ ಮುಖ್ಯ ಅತಿಥಿ ಯಾರು ಬಂದಿರಲಿಲ್ಲ. 2020 ರಲ್ಲಿ, ಆಗಿನ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರು ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx