ನವದೆಹಲಿ: ಶಾಲಾ ಮತ್ತು ಕಾಲೇಜು ತರಗತಿಗಳಲ್ಲಿ ಹಿಜಾಬ್ ಗಳನ್ನು ನಿಷೇಧಿಸುವ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಗಳ ಒಂದು ಬ್ಯಾಚ್ ಅನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ.
ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರು ಹಾಗೂ ಭಾರತದ ನೂತನ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರ ಪೀಠ ಅರ್ಜಿಗಳ ವಿಚಾರಣೆ ನಡೆಸಲಿದ್ದಾರೆ.
ಈ ಹಿಂದೆ, ಅಂದಿನ ಸಿಜೆಐ ಎನ್.ವಿ.ರಮಣ ನೇತೃತ್ವದ ನ್ಯಾಯಪೀಠದ ಮುಂದೆ ಹಲವಾರು ಸಂದರ್ಭಗಳಲ್ಲಿ ತುರ್ತು ವಿಚಾರಣೆಗಾಗಿ ಅರ್ಜಿಗಳನ್ನು ಉಲ್ಲೇಖಿಸಲಾಗಿತ್ತು, ಆದರೆ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡಿರಲಿಲ್ಲ.
ಶಾಲಾ ಕಾಲೇಜುಗಳ ಸಮವಸ್ತ್ರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ನಿರ್ದೇಶಿಸಿದ್ದ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿಹಿಡಿದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿಗಳನ್ನು ಸಲ್ಲಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz