ತುಮಕೂರು: ಗೊರವನಹಳ್ಳಿ ಮಹಾಲಕ್ಷ್ಮಿ ಸನ್ನಿಧಾನಕ್ಕೆ ಇನ್ಫೋಸಿಸ್ ಮುಖ್ಯಸ್ಥೆ ಭೇಟಿ ನೀಡಿದ್ದಾರೆ. ಸುಧಾ ಮೂರ್ತಿ ಅವರು ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಕ್ಷೇತ್ರಕ್ಕೆ ಸಂಬಂಧಿಕರೊಂದಿಗೆ ಆಗಮಿಸಿ ಮಹಾಲಕ್ಷ್ಮಿ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ.

ಅವರು ಸಾಮಾನ್ಯರಂತೆ ಬಂದು ಮಹಾಲಕ್ಷ್ಮಿ ತಾಯಿಗೆ ಪೂಜೆ ಸಲ್ಲಿಸಿದ್ದು, ಇದಾದ ಬಳಿಕ ದೇವಸ್ಥಾನದ ಆಡಳಿತ ಮಂಡಳಿಯ ಜೊತೆ ಕೆಲಕಾಲ ಚರ್ಚೆ ನಡೆಸಿದರು. ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಅವರಿಗೆ ಸನ್ಮಾನ ಮಾಡಲಾಯಿತು. ಸುಧಾಮೂರ್ತಿಯವರಿಗೆ ದೇವಸ್ಥಾನದ ಆಡಳಿತ ಮಂಡಳಿ ಮುಖಂಡರು ಹಾಗೂ ಸದಸ್ಯರು ಸಾಥ್ ನೀಡಿದರು.

ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


