ಬೆಂಗಳೂರು: ಮದ್ಯದ ಅಮಲಿನಲ್ಲಿ ಬಿದ್ದು ಗಾಯಗೊಂಡಿದ್ದ ದಿನೇಶ್ ಸುಬ್ಬಾ (31), ತಮ್ಮ ಮೇಲೆ ಹಲ್ಲೆಯಾಗಿರುವುದಾಗಿ ಸುಳ್ಳು ದೂರು ನೀಡಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ.
‘ಸಿಕ್ಕಿಂನ ದಿನೇಶ್, ನಗರದ ರೆಸ್ಟೋರೆಂಟ್ ವೊಂದರ ಕೆಲಸಗಾರ, ಚೀನಾ ಪ್ರಜೆಯೆಂದು ತಿಳಿದು ದುಷ್ಕರ್ಮಿಗಳು ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆಂದು ಹೇಳಿ ದೂರು ನೀಡಿದ್ದರು. ತನಿಖೆ ಕೈಗೊಂಡಾಗ, ದಿನೇಶ್ ಅವರೇ ಸುಳ್ಳು ದೂರು ನೀಡಿರುವುದು ಗೊತ್ತಾಗಿದೆ’ ಎಂದು ಎಲೆಕ್ಟ್ರಾನಿಕ್ ಸಿಟಿ ಠಾಣೆಯ ಪೊಲೀಸ್ ಮೂಲಗಳು ಹೇಳಿವೆ.