ಸರಗೂರು: ನಾರಾಯಣ ಗುರುಗಳು ಶೋಷಿತರ ವರ್ಗಗಳಿಗೆ ಧಾರ್ಮಿಕ ಸ್ವಾತಂತ್ರ್ಯ ನೀಡಿದ್ದಾರೆ, ಅಂತರ ವಿಧಾನಸೌಧ ಮತ್ತು ವಿಕಾಸಸೌಧ ಮುಂಭಾಗದಲ್ಲಿ ಶ್ರೀ ನಾರಾಯಣ ಗುರುಗಳ ಪ್ರತಿಮೆ ನಿರ್ಮಾಣ ಮಾಡಬೇಕು ಎಂದು ಸರ್ಕಾರಕ್ಕೆ ಆರ್ಯ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಎಸ್.ಎನ್.ನಾಗರಾಜು ಒತ್ತಾಯಿಸಿದರು.
ಪ್ರತಿಯೊಬ್ಬರೂ ಶಿಕ್ಷಣವಂತರಾಗಬೇಕೆಂದು ಅಂದು ಕನಸು ಕಂಡಿದ್ದರು. ನಾರಾಯಣ ಗುರುಗಳ ಆದರ್ಶ, ವಿಚಾರ ತತ್ವಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು. ಅವರು ಜಗತ್ತು ಕಂಡ ಅಪರೂಪದ ಸಂತರಲ್ಲಿ ಒಬ್ಬರು. ಮೌನ ಕ್ರಾಂತಿಯ ಹರಿಕಾರ ಶ್ರೀ ನಾರಾಯಣ ಗುರುಗಳ ವಿಧಾನಸೌಧ ಮುಂಭಾಗದಲ್ಲಿ ನಿರ್ಮಾಣ ಮಾಡಲು ಚಳಿಗಾಲ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯರಾದ ಹರಿಪ್ರಸಾದ್ ರವರು ಧ್ವನಿ ಎತ್ತಬೇಕು ಎಂದು ಮನವಿ ಮಾಡಿದರು.
‘ಒಂದೇ ಜಾತಿ, ಒಂದೇ ಮತ, ಒಂದೇ ದೇವರು’ ಎಂದು ಇಡೀ ಮನುಕುಲಕ್ಕೇ ಸಾರಿದವರು ಸಂತಶ್ರೇಷ್ಠ ನಾರಾಯಣಗುರುಗಳು. ಇಂದಿನ ಸಮಾಜದಲ್ಲಿ ಧರ್ಮದ ಹೆಸರಿನಲ್ಲಿ ಜಾತೀಯ ವಿಷ ಭಾವನೆಗಳನ್ನು ಬಿತ್ತಿ, ‘ನಮ್ಮ ಧರ್ಮ’, ‘ನಮ್ಮ ಸಿದ್ಧಾಂತ’ ಎನ್ನುತ್ತಾ ಮತಭ್ರಾಂತಿಯಿಂದ ಪರಸ್ಪರ ಹೊಡೆದಾಡಿಕೊಳ್ಳುತ್ತಿದ್ದಾರೆ. ಇಂಥ ಕಾಲಘಟ್ಟದಲ್ಲಿ, ‘ಅವನವನ ಆತ್ಮಸುಖಕ್ಕಾಗಿ ಗೈಯುವ ಕರ್ಮಗಳೆಲ್ಲವೂ ಮತ್ತೊಬ್ಬರ ಹಿತವನ್ನು ಕಾಪಾಡಲಿ’ ಎಂಬ ನಾರಾಯಣಗುರುಗಳ ಸಂದೇಶವು ಅತ್ಯಂತ ಪ್ರಸ್ತುತವಾಗಿದೆ.
ತಾನು ಮಾಡುವ ಪ್ರತಿಯೊಂದು ಕರ್ಮದಿಂದ ಇತರರಿಗೆ ಯಾವುದೇ ತೊಂದರೆ ಉಂಟಾಗಬಾರದು ಎಂಬುದೇ ಗುರುಗಳ ಪ್ರತಿಮೆ ನಿರ್ಮಾಣ ಮಾಡುವುದರಿಂದ ಚುನಾವಣೆಯಲ್ಲಿ ಆಯ್ಕೆಯಾದ ಪ್ರತಿಯೊಬ್ಬರಿಗೂ ಸೌಧಕ್ಕೆ ಬರುವ ನಾಯಕರಿಗೆ ನಾರಾಯಣ ಗುರುಗಳ ಪ್ರತಿಮೆ ನಿರ್ಮಾಣ ಮಾಡುವುದರಿಂದ ಅವರನ್ನು ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಳ್ಳಬಹುದು.ಅವರು ಯಾರಿಗೂ ತೊಂದರೆಯಾಗದಂತೆ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಸಾರಿದರು ಪುತ್ಥಳಿ ಶಂಕುಸ್ಥಾಪನೆ ಮಾಡಬೇಕು ಎಂದು ಪತ್ರಿಕೆ ಪ್ರಕಟಣೆ ಮೂಲಕ ಸರ್ಕಾರಕ್ಕೆ ಆಗ್ರಹಿಸಿದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


