ಹಾಸನ: ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವ ನಿಟ್ಟಿನಲ್ಲಿ, ಹಾಸನದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕಾಮಗಾರಿ ಸ್ಥಳಕ್ಕೆ ಅಬಕಾರಿ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಮತ್ತು ಹಾಸನ ಸಂಸದರಾದ ಶ್ರೇಯಸ್ ಎಂ. ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನೂತನವಾಗಿ ತಲೆ ಎತ್ತುತ್ತಿರುವ ಹೈಟೆಕ್ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಹಾಗೂ ಬಡವರಿಗೆ ಅತ್ಯಾಧುನಿಕ ವೈದ್ಯಕೀಯ ಸೇವೆ ಒದಗಿಸುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕಾಮಗಾರಿ ಪ್ರಗತಿಯನ್ನು ಸಚಿವರು ಮತ್ತು ಸಂಸದರು ವೀಕ್ಷಿಸಿದರು.
ಅಭಿವೃದ್ಧಿ ಕಾಮಗಾರಿಗಳಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ, ಅತ್ಯುತ್ತಮ ಗುಣಮಟ್ಟದೊಂದಿಗೆ ನಿಗದಿತ ಕಾಲಮಿತಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.
ಈ ಮಹತ್ತ್ವಾಕಾಂಕ್ಷಿ ಯೋಜನೆಗಳು ಆದಷ್ಟು ಶೀಘ್ರವಾಗಿ ಲೋಕಾರ್ಪಣೆಗೊಂಡು ಹಾಸನ ಜಿಲ್ಲೆಯ ಜನಸಾಮಾನ್ಯರಿಗೆ ಸರಕಾರಿ ಸೇವೆಗಳು ಹಾಗೂ ಉತ್ತಮ ಆರೋಗ್ಯ ಸೌಲಭ್ಯಗಳು ಸುಲಭವಾಗಿ ಲಭ್ಯವಾಗುವಂತೆ ಕ್ರಮ ವಹಿಸಲು ತಿಳಿಸಲಾಯಿತು.
ವರದಿ: ಮಂಜು ಶ್ರವಣೂರು, ಹೊಳೆನರಸೀಪುರ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
