ಬೆಂಗಳೂರಿನ ಗುಂಜೂರು ಸೋಮೇಶ್ವರ ದೇವಸ್ಥಾನದ ಹತ್ತಿರ ವಲ್ಲಿದೇವ ಸೇನಾ ಸಮೇತ ನಾಗ ದೇವತೆಗಳ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಸಲಾಯಿತು.
ಮಹದೇವಪುರ ವಿಧಾನಸಭಾ ಕ್ಷೇತ್ರದ ಗುಂಜೂರು ಶ್ರೀ ಸೋಮೇಶ್ವರ ದೇವಸ್ಥಾನದ ಹತ್ತಿರ ಹಮ್ಮಿಕೊಂಡ ವಲ್ಲಿದೇವ ಸೇನಾ ಸಮೇತ ನಾಗ ದೇವತೆಗಳ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಶಾಸಕಿ ಮಂಜುಳಾ ಲಿಂಬಾವಳಿ ಭಾಗವಹಿಸಿದರು. ಇದೇ ವೇಳೆ, ನಾಗ ದೇವತೆಗಳ ಆಶೀರ್ವಾದ ಪಡೆದು ನಾಡಿನ ಕಲ್ಯಾಣಕ್ಕಾಗಿ ಪ್ರಾರ್ಥಿಸಲಾಯಿತು.
ಇದೇ ಸಂದರ್ಭದಲ್ಲಿ ಅನ್ನಪ್ರಸಾದ ವಿತರಿಸಿ, ಶ್ರೀ ಸೋಮೇಶ್ವರ ದೇವಸ್ಥಾನಕ್ಕೆ ತೆರಳಿ, ದೇವರ ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷರಾದ ಶ್ರೀ ಮನೋಹರ ರೆಡ್ಡಿ, ಸ್ಥಳೀಯ ಮುಖಂಡರು, ಅಪಾರ ಸಂಖ್ಯೆ ಭಕ್ತರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


