ಎಸ್ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳಲ್ಲಿ ಕೆಲವೊಂದು ಮಹತ್ವದ ಮಾರ್ಪಾಡುಗಳನ್ನು ಮಾಡಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ನಿರ್ಧರಿಸಿದ್ದು, ಇದರ ಬಗ್ಗೆ ಇಲಾಖೆಯ ಹಿರಿಯ ಅಧಿಜಾರಿಗಳ ಜೊತೆಗೆ ಚರ್ಚೆ ನಡೆಯುತ್ತಿದೆ ಎಂದು ಖುದ್ದು ಸಚಿವರೇ ಸ್ಪಷ್ಟನೆ ನೀಡಿದ್ದಾರೆ.
ಅಷ್ಟಕ್ಕೂ ಏನಿದು ಪೂರಕ ಪರೀಕ್ಷೆಯಲ್ಲಿ ಹೊಸದಾದ ಮಾರ್ಪಾಡು ಎಂಬುದನ್ನು ನೋಡುವುದಾದ್ರೆ, ಈವರೆಗೂ ಎಸ್ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಗಳಿಗೆ ಶೈಕ್ಷಣಿಕ ವರ್ಷದಲ್ಲಿ ಬರುವ ಪರೀಕ್ಷೆಯಲ್ಲಿ ಅನುತ್ತೀರ್ಣರಾದ್ರೆ, ಅಂತಹ ವಿದ್ಯಾರ್ಥಿಗಳಿಗೆ ಒಂದು ವರ್ಷ ಹಾಳಾಗದಂತೆ ಇಲಾಖೆ ಎರಡು ತಿಂಗಳೊಳಗೆ ಪರೀಕ್ಷೆ ನಡೆಸಿ, ಅವರು ಉತ್ತೀರ್ಣರಾಗುವಂತೆ ನೋಡಿಕೊಳ್ಳುತ್ತಿತ್ತು.
ಇದೀಗ ಇದೇ ಪದ್ಧತಿಯಂತೆ ಒಂದು ಪೂರಕ ಪರೀಕ್ಷೆಯ ಬದಲಿಗೆ ಎರಡು ಪೂರಕ ಪರೀಕ್ಷೆಗಳನ್ನು ನಡೆಸಿ, ಹೆಚ್ಚು ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗುವಂತೆ ನೋಡಿಕೊಳ್ಳುವ ಹೊಸ ಕ್ರಮದ ಬಗ್ಗೆ ಇಲಾಖಾ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿದ್ದು, ಒಮ್ಮೆ ಇದು ಅಂತಿಮವಾದ್ರೆ, ಸಿಎಂ ಗಮನಕ್ಕೆ ಇದನ್ನು ತಂದು ಬಳಿಕ ಅನುಷ್ಠಾನ ಮಾಡಲು ಸಚಿವ ಮಧು ಬಂಗಾರಪ್ಪ ನಿರ್ಧರಿಸಿದ್ದಾರೆ ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


