ವಿಶ್ವವಿದ್ಯಾಲಯಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಅನ್ನು ಎಸ್. ಪಿ. ಎಸ್. ಪಿ., ಟಿ. ಎಸ್. ಪಿ. ಅಡಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕುಲಪತಿಗಳು, ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಲ್ಯಾಪ್ ಟಾಪ್ ಸಂಬಂಧ 230 ಕೋಟಿ ರೂ. ಒದಗಿಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಗೆ ಸಭೆ ನಡೆಯುವಾಗಲೇ ದೂರವಾಣಿ ಮೂಲಕ ಸೂಚನೆ ನೀಡಿದರು.


