ತುಮಕೂರು: ಕೊರಟಗೆರೆ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿರುವ ಖಾಸಗಿ/ ಸರ್ಕಾರಿ ಶಿಕ್ಷಣ ಸಂಸ್ಥೆ, ಆಸ್ಪತ್ರೆ, ಕ್ರೀಡಾ ಸಂಕೀರ್ಣ, ಬಸ್ / ರೈಲ್ವೆ ನಿಲ್ದಾಣಗಳ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ಇದ್ದಲ್ಲಿ ಪರಿಶೀಲಿಸಿ, ಅವುಗಳ ಸಂಖ್ಯೆಯನ್ನು ಲೆಕ್ಕ ಮಾಡಿ, ಕೂಡಲೇ ಕೊರಟಗೆರೆ ಪಟ್ಟಣ ಪಂಚಾಯತಿಗೆ ವರದಿ ನೀಡಬೇಕೆಂದು ಸಂಬಂಧಿಸಿದ ಮುಖ್ಯಸ್ಥರಿಗೆ ಮುಖ್ಯಾಧಿಕಾರಿ ಸೂಚನೆ ನೀಡಿದ್ದಾರೆ.
ಮಾನ್ಯ ಸರ್ವೋಚ್ಚ ನ್ಯಾಯಾಲಯ ಆದೇಶದನ್ವಯ ಬೀದಿ ನಾಯಿಗಳ ಉಪಟಳ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಬೀದಿ ನಾಯಿಗಳ ಪ್ರದೇಶವನ್ನು ನಿಯಂತ್ರಿಸಲು ಹಾಗೂ ಅವುಗಳ ಪ್ರವೇಶವನ್ನು ನಿರ್ಬಂಧಿಸಲು, ನಗರ ಸ್ಥಳೀಯ ಸಂಸ್ಥೆಯಿಂದ ಸ್ಥಳಾಂತರಿಸುವುದನ್ನು ಮೇಲ್ವಿಚಾರಣೆ ಮಾಡಲು ಸಂಸ್ಥೆಗಳ ಒಬ್ಬ ಜವಾಬ್ದಾರಿಯುತ ನೌರಕನನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಬೇಕು. ಸಂಸ್ಥೆಯ ಆವರಣದಲ್ಲಿ ಪುನಃ ಬೀದಿ ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟರೆ ಸ್ಥಳಾಂತರ ವೆಚ್ಚವನ್ನು ಸಂಬಂಧಿತ ಸಂಸ್ಥೆಯಿಂದಲೇ ವಸೂಲಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


