ಬೆಂಗಳೂರು: ಕನ್ನಡ ಅಭಿಮಾನವನ್ನು ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಹೋಲಿಸಿದ ಗಾಯಕ ಸೋನು ನಿಗಮ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್ ಆದೇಶ ಮಾಡಿದೆ.
ಬೆಂಗಳೂರಿನ ಖಾಸಗಿ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಸೋನು ನಿಗಮ್ ಗೆ ಕನ್ನಡ ಹಾಡು ಹೇಳಿ ಎಂದಿದ್ದಕ್ಕೆ, ಇದಕ್ಕೆ ಪಹಲ್ಗಾಮ್ ದಾಳಿ ನಡೆದಿದ್ದು ಎಂದಿದ್ದರು. ಈ ಹೇಳಿಕೆ ವಿರುದ್ಧ ಬೆಂಗಳೂರಿನಲ್ಲಿ ಪ್ರಕರಣ ದಾಖಲಾಗಿತ್ತು.
ಬಳಿಕ ಪ್ರಕರಣ ರದ್ದುಕೋರಿ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಏಕಸದಸ್ಯಪೀಠ, ಗಾಯಕನ ವಿರುದ್ಧ ತನಿಖಾಧಿಕಾರಿಗಳು ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW