ಸರಗೂರು: ಒಕ್ಕಲಿಗರ ಸಮಾಜವನ್ನು ಬಾಯಿಗೆ ಬಂದಂತೆ ಮಾತನಾಡಿರುವ ಕಾಂಗ್ರೆಸ್ ಪಕ್ಷದ ಮುಖಂಡ ಸೀತಾರಾಮ್ ಜಿಲ್ಲಾ ಮತ್ತು ತಾಲೂಕಿನಿಂದ ಗಡಿಪಾರು ಮಾಡಬೇಕು. ಎಂದು ಸರಗೂರು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಸುಧೀರ್ ಗೌಡ ಒತ್ತಾಯಿಸಿದರು.
ಪಟ್ಟಣದ ನಾಮಧಾರಿಗೌಡ ಸಮುದಾಯದ ಭವನದಲ್ಲಿ ಸೋಮವಾರದಂದು ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಪೂರ್ವಭಾವಿ ಸಭೆ ಹಮ್ಮಿಕೊಂಡಿದ್ದು, ಕಾಂಗ್ರೆಸ್ ಪಕ್ಷದ ಮುಖಂಡ ಸೀತಾರಾಮ್ ಒಕ್ಕಲಿಗರ ಸಮಾಜವನ್ನು ಬಾಯಿಗೆ ಬಂದಂತೆ ಮಾತನಾಡಿರುವ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸಭೆಯಲ್ಲಿ ಮಾತನಾಡಿದರು.
ಈ ವ್ಯಕ್ತಿ ನಮ್ಮ ಸಮಾಜದ ಬಗ್ಗೆ ಕೆಟ್ಟದಾಗಿ ಮಾತನಾಡಿದರುವುದು ತಪ್ಪು. ಇವನು ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಇಲ್ಲವಾದರೆ, ಸೀತಾರಾಮ್ ವಿರುದ್ಧ ಪ್ರತಿಭಟನೆ ನಡೆಸಲಾಗುವುದು, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರು ನೀಡಲಾಗುವುದು. ಯಾವುದೇ ವ್ಯಕ್ತಿ ಯಾವುದೇ ಜನಾಂಗದ ಮೇಲೆ ಕೆಟ್ಟದಾಗಿ ಮಾತನಾಡಬಾರದು. ತಾಲೂಕಿನ ಎಲ್ಲಾ ಗ್ರಾಮಗಳ ಮುಖಂಡರ ಸಮ್ಮುಖದಲ್ಲಿ ಉಗ್ರ ಹೋರಾಟ ಮಾಡಿ ಎಚ್.ಡಿ.ಕೋಟೆ ಮತ್ತು ಸರಗೂರು ತಾಲೂಕಿನಿಂದ ಗಡಿಪಾರು ಮಾಡುವಂತೆ ಆಗ್ರಹಿಸಿದರು.
ಮುಂದಿನ ದಿನಗಳಲ್ಲಿ ಇಂತ ವ್ಯಕ್ತಿಗಳಿಂದ ಸಮಾಜಗಳಿಗೆ ಕಳಂಕ ತರುವ ಉದ್ದೇಶವಾಗಿ ಮಾಡುತ್ತಿದ್ದಾರೆ. ಅಂತವರು ತಾಲೂಕಿನಲ್ಲಿ ಇದ್ದರೆ ಇನ್ನೂ ಸಮಸ್ಯೆಗಳು ಹುಟ್ಟಿಕೊಳ್ಳುತ್ತವೆ. ಈ ವ್ಯಕ್ತಿಯನ್ನು ಗಡಿಪಾರು ಮಾಡುವಂತೆ ಅವರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಸಿದ್ದೇಗೌಡ, ಉಪಾಧ್ಯಕ್ಷರು ಅಶೋಕ್ ಕುಮಾರ್ ಬಿ.ಜೆ., ಸಹಕಾರ್ಯದರ್ಶಿ ಚೇತನ್, ಖಜಾಂಚಿ ಸಕಲೇಶ್, ಸಂಘಟನಾ ಕಾರ್ಯದರ್ಶಿ ಸುರೇಶ, ನಿರ್ದೇಶಕರು ಶಿವರಾಜು, ಮಹದೇವಸ್ವಾಮಿ, ರವಿ, ನವೀನ್, ಕಾಳಪ್ಪ ಸಿ., ಮಹೇಂದ್ರ, ನಿಂಗೇಗೌಡ, ನಾಗೇಶ್, ವೆಂಕಟೇಶ್ ಮುಖಂಡರಾದ ಕೃಷ್ಣೇಗೌಡ, ಮಹಾದೇವ, ನಾಗರಾಜು, ಮತ್ತಿತರರು ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC