ತುಮಕೂರು: ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ 2026-27ನೇ ಸಾಲಿಗೆ ಅಧಿಸೂಚನೆ ಹೊರಡಿಸಿರುವ ಅಡಕೆ ಮತ್ತು ಮಾವು ಬೆಳೆಗಳನ್ನು ವಿಮಾ ಸೌಲಭ್ಯಕ್ಕೊಳಪಡಿಸುವ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಕೊರಟಗೆರೆ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ರಾಮಾಂಜನಪ್ಪ ರೈತರಲ್ಲಿ ಮನವಿ ಮಾಡಿದ್ದಾರೆ.
ಕೊರಟಗೆರೆ ತಾಲೂಕಿನಲ್ಲಿ ಮಾವು ಬೆಳೆಯನ್ನು ವಿಮಾ ಸೌಲಭ್ಯಕ್ಕೆ ಒಳಪಡಿಸಲಾಗಿದ್ದು, ಮಾವು ಬೆಳೆಯನ್ನು ನೋಂದಾಯಿಸಲು ಜುಲೈ 31 ಕಡೆಯ ದಿನವಾಗಿದೆ. ಮಾವು ಬೆಳೆಗೆ ಪ್ರತಿ ಹೆಕ್ಟೇರ್ಗೆ ವಿಮಾ ಮೊತ್ತ 80,000 ರೂ. ಹಾಗೂ ಶೇ.5ರಂತೆ ರೈತರು ಪಾವತಿಸಬೇಕಾದ ವಿಮಾ ಕಂತಿನ ದರ 4000 ರೂ.ಗಳಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ರೈತರು ಹೋಬಳಿವಾರು ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳಾದ ಕಸಬಾ–8453650483, ಸಿ.ಎಸ್.ದುರ್ಗ–9449245960, ಹೊಳವನಹಳ್ಳಿ–9986456750, ಕೋಳಾಲ–9663457195, ಕೊರಟಗೆರೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು–9448001644ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


