nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ

    August 24, 2026

    ಹೆಗ್ಗೇರೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು:  8 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗೆ ಡಿಸಿಎಂ ಚಾಲನೆ

    August 24, 2026

    ಗೌತಮ್‌ ಅದಾನಿ ಭೇಟಿ ಬಗ್ಗೆ  ಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ

    August 24, 2026
    Facebook Twitter Instagram
    ಟ್ರೆಂಡಿಂಗ್
    • ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ
    • ಹೆಗ್ಗೇರೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು:  8 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗೆ ಡಿಸಿಎಂ ಚಾಲನೆ
    • ಗೌತಮ್‌ ಅದಾನಿ ಭೇಟಿ ಬಗ್ಗೆ  ಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ
    • ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು
    • ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ
    • ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಹೇಮೆ ನೀರು: ಡಿಸಿಎಂ ಡಾ.ಜಿ.ಪರಮೇಶ್ವರ್  ಪರಿಶೀಲನೆ
    • ಬರ ಪರಿಸ್ಥಿತಿಯಲ್ಲಿ ಹೈನುಗಾರಿಕೆ ಆಸರೆ: ತುಮುಲ್‌  ನಿರ್ದೇಶಕ ಸಂಜೀವಗೌಡ
    • ಸೆ.2ರಿಂದ ಪದವಿ ವಿದ್ಯಾರ್ಥಿಗಳಿಗೂ ಬಿಸಿಯೂಟ: ರಾಜೇಂದ್ರ ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಕ್ರಮ ಚಟುವಟಿಕೆ ತಡೆಗೆ ಅಂತಾರಾಜ್ಯ ಪೊಲೀಸ್ ಸಮನ್ವಯ ಸಭೆ: ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ
    ಜಿಲ್ಲಾ ಸುದ್ದಿ July 3, 2026

    ಅಕ್ರಮ ಚಟುವಟಿಕೆ ತಡೆಗೆ ಅಂತಾರಾಜ್ಯ ಪೊಲೀಸ್ ಸಮನ್ವಯ ಸಭೆ: ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ

    By adminJuly 3, 2026No Comments2 Mins Read
    police.jpg

    ಔರಾದ್: ಗಡಿ ಪ್ರದೇಶಗಳಲ್ಲಿ ಕಳ್ಳಸಾಗಣೆ ಸೇರಿದಂತೆ ವಿವಿಧ ಅಕ್ರಮ ಚಟುವಟಿಕೆಗಳ ನಿಯಂತ್ರಣ ಮತ್ತು ಗಡಿ ಭದ್ರತೆಯನ್ನು ಬಲಪಡಿಸಲು ನೆರೆಯ ರಾಜ್ಯಗಳ ಪೊಲೀಸ್ ಅಧಿಕಾರಿಗಳೊಂದಿಗಿನ ಸಮನ್ವಯ ಸಭೆಗಳು ಹೆಚ್ಚು ನೆರವಾಗುತ್ತವೆ ಎಂದು ಭಾಲ್ಕಿ ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ ಹೇಳಿದರು.

    ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಅಂತಾರಾಜ್ಯ ಗಡಿ ಅಪರಾಧ ಸಮನ್ವಯ ಸಭೆಯಲ್ಲಿ ಅವರು ಮಾತನಾಡಿದರು. ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಮತ್ತು ಕುಖ್ಯಾತ ಅಪರಾಧಿಗಳನ್ನು ಪತ್ತೆಹಚ್ಚಲು ಅಂತಾರಾಜ್ಯ ಪೊಲೀಸ್ ಅಧಿಕಾರಿಗಳು ಪರಸ್ಪರ ಕೈಜೋಡಿಸಿದರೆ ಕಠಿಣ ಪ್ರಕರಣಗಳನ್ನು ಸುಲಭವಾಗಿ ಬೇಧಿಸಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

    ಸಭೆಯ ನಿರ್ಧಾರಗಳು:

    ಮಾಹಿತಿ ವಿನಿಮಯ: ಅಪರಾಧಿಗಳ ಕುರಿತಾದ ಪ್ರಮುಖ ಮಾಹಿತಿಯನ್ನು ರಾಜ್ಯಗಳ ನಡುವೆ ಹಂಚಿಕೊಳ್ಳುವುದು.
    ಜಂಟಿ ಗಸ್ತು: ಗಡಿ ಭದ್ರತೆಯನ್ನು ಹೆಚ್ಚಿಸಲು ಗಡಿ ಭಾಗಗಳಲ್ಲಿ ಪೊಲೀಸ್ ಗಸ್ತು ವ್ಯವಸ್ಥೆಯನ್ನು ಬಲಪಡಿಸುವುದು.
    ಉತ್ತಮ ಸಮನ್ವಯತೆ: ಗಡಿ ಭಾಗದ ಪೊಲೀಸ್ ಠಾಣೆಗಳ ನಡುವೆ ನಿರಂತರ ಸಂಪರ್ಕ ಸಾಧಿಸಿ, ತನಿಖಾ ಪ್ರಕ್ರಿಯೆಯನ್ನು ಸುಲಭಗೊಳಿಸುವುದು.

    ಕಾನೂನು ಸುವ್ಯವಸ್ಥೆ: ಕಳ್ಳಸಾಗಾಣಿಕೆ ತಡೆದು ಗಡಿ ಪ್ರದೇಶಗಳಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವುದು.
    ಇದೇ ವೇಳೆ ಮಾತನಾಡಿದ ಹುಮನಾಬಾದ್ ಡಿವೈಎಸ್ಪಿ ಮಡೋಳಪ್ಪ, ಮಹಾರಾಷ್ಟ್ರದ ಉದಗೀರ ಪೊಲೀಸ್ ಇನ್ಸ್ಪೆಕ್ಟರ್ ಗಜಾನನ ಬಲಹತ್ವಂಡೆ (ಜಗಾನಂದ ಬಟವಾಡೆ), ನಿಲಂಗಾ ಡಿವೈಎಸ್ಪಿ ವಿಶಾಲ ಧೂಮೆ, ದೇಗಲೂರ ಡಿವೈಎಸ್ಪಿ ಕಿರಣ ಪೋಪಲಘಾಟ ಹಾಗೂ ತೆಲಂಗಾಣದ ನಾರಾಯಣಖೇಡ ಡಿವೈಎಸ್ಪಿ ವೆಂಕಟ ರೆಡ್ಡಿ ಅವರು, ಭವಿಷ್ಯದಲ್ಲಿ ಅಪರಾಧ ನಿಯಂತ್ರಣಕ್ಕಾಗಿ ಇನ್ನಷ್ಟು ಪರಿಣಾಮಕಾರಿ ಸಮನ್ವಯ ವ್ಯವಸ್ಥೆಯನ್ನು ರೂಪಿಸುವ ಕುರಿತು ಹಲವು ಉಪಯುಕ್ತ ಸಲಹೆಗಳನ್ನು ನೀಡಿದರು.

    ಸಭೆಯಲ್ಲಿ ಸಿಪಿಐ ರುದ್ರವೀರಸಿಂಗ್ ಠಾಕೂರ್, ಕಮಲನಗರ ಸಿಪಿಐ ಶ್ರೀಕಾಂತ ಅಲ್ಲಾಪುರೆ, ಮೇಹೆಕರ್ ಪಿಎಸ್ ಐ ಸುದರ್ಶನ ರಡ್ಡಿ, ಸಂತಪುರ ಪಿಎಸ್ಐ ದಿನೇಶ್ ಎಂ.ಟಿ., ಕಮಲನಗರ ಪಿಎಸ್ ಐ ಆಶಾ ರಾಠೋಡ್, ಹೊಕ್ರಣಾ ಪಿಎಸ್ಐ ಉಷಾಬಾಯಿ, ಉದಗೀರ ಎಸ್ಡಿಪಿಒ ಟಿ.ಎಂ. ಮಮಕಾರ, ಬೀದರ್ ಗ್ರಾಮೀಣ ಪೊಲೀಸ್ ಠಾಣೆಯ ಮಹೇಶ ಪಾಟೀಲ್ ಸೇರಿದಂತೆ ಗಡಿ ರಾಜ್ಯಗಳ ಪೊಲೀಸ್ ಅಧಿಕಾರಿಗಳಾದ ಎಚ್.ಪಿ.ಬಾಗಾರ, ಪಿ.ಎ. ಗರ್ಜೆ, ಎ.ಪಿ. ಕೊಡವಾದ, ಆರ್.ಎಂ.ಹುಂಡೇಕರ, ಆರ್.ಜಿ. ಚವ್ಹಾಣ್, ಡಿ.ಡಿ. ಗಡೆ ಮತ್ತಿತರರು ಉಪಸ್ಥಿತರಿದ್ದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    ಬೀದರ್: ಬರ ಘೋಷಣೆ, ಸಾಲಮನ್ನಾ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ಬೃಹತ್ ರಸ್ತೆ ತಡೆ

    August 22, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ

    August 24, 2026

    ತುಮಕೂರು: ತಾಲೂಕಿನ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮೀಣ ಪ್ರದೇಶದ ಅರ್ಹ ಕುಟುಂಬಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ವಿಬಿ ಜಿ ರಾಮ್…

    ಹೆಗ್ಗೇರೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು:  8 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗೆ ಡಿಸಿಎಂ ಚಾಲನೆ

    August 24, 2026

    ಗೌತಮ್‌ ಅದಾನಿ ಭೇಟಿ ಬಗ್ಗೆ  ಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ

    August 24, 2026

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.