ತುಮಕೂರು: ಬೆಸ್ಕಾಂ ನಗರ ಉಪವಿಭಾಗ-1ರಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಮಾರ್ಚ್ 23ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿವಿಧೆಡೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಚಿಕ್ಕಪೇಟೆ, ಅಗ್ರಹಾರ, ಗಾರ್ಡನ್ ರಸ್ತೆ, ಬಿ.ಜಿ.ಪಾಳ್ಯ, ವಿನಾಯಕನಗರ, ಜೆ.ಸಿ.ರಸ್ತೆ, ಸಿವಿಲ್ ಬಸ್ ನಿಲ್ದಾಣ, ಆಂಜನೇಯ ವಿಗ್ರಹ ಹತ್ತಿರ, ಜಿ.ಸಿ.ಆರ್. ಕಾಲೋನಿ, ಬಾವಿಕಟ್ಟೆ ಕಲ್ಯಾಣ ಮಂಟಪದ ಹತ್ತಿರ, ಶಿರಾ ರಸ್ತೆ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಮಧ್ಯಂತರ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಾಗರಾಜು ಹೆಚ್.ಪಿ. ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4