nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!

    June 1, 2026

    ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ

    June 1, 2026

    ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

    June 1, 2026
    Facebook Twitter Instagram
    ಟ್ರೆಂಡಿಂಗ್
    • ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!
    • ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
    • ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
    • ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
    • ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಒಳಮೀಸಲಾತಿ: ಸುಪ್ರೀಂ ಕೋರ್ಟ್ ಆದೇಶ ಸ್ವಾಗತಿಸಿ ದಲಿತ ಸಂಘಟನೆಗಳಿಂದ ಸಂಭ್ರಮ
    ತಿಪಟೂರು August 2, 2024

    ಒಳಮೀಸಲಾತಿ: ಸುಪ್ರೀಂ ಕೋರ್ಟ್ ಆದೇಶ ಸ್ವಾಗತಿಸಿ ದಲಿತ ಸಂಘಟನೆಗಳಿಂದ ಸಂಭ್ರಮ

    By adminAugust 2, 2024No Comments2 Mins Read
    dalith

     

    ತಿಪಟೂರು:  ಒಳಮೀಸಲಾತಿ ಕುರಿತು ಸರ್ವೋಚ್ಚ ನ್ಯಾಯಾಲಯದ ಆದೇಶವನ್ನ ಸ್ವಾಗತಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಕರ್ನಾಟಕ ಮಾದಿಗ ದಂಡೋರದಿಂದ ತುಮಕೂರು ಜಿಲ್ಲೆ ತಿಪಟೂರು ನಗರದ ನಗರಸಭಾ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ವಿತರಣೆ ಮಾಡುವ ಮೂಲಕ ಸಂಭ್ರಮಾಚರಣೆ ನಡೆಸಲಾಯಿತು.


    Provided by
    Provided by

    ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಜಿಲ್ಲಾಪಂಚಾಯ್ತಿ ಸದಸ್ಯ ಕೊಪ್ಪಶಾಂತಪ್ಪ, ಶೋಷಿತ ಸಮುದಾಯಗಳು ಸರ್ಕಾರದ ಮೀಸಲಾತಿ ಸವಲತ್ತುಗಳನ್ನ ಪಡೆಯಬೇಕು ಎಂದರೆ ಒಳಮೀಸಲಾತಿ ಜಾರಿಯಾಗಬೇಕು ಎಂದು ಕಳೆದ ಮೂರ್ನಾಲ್ಕು ದಶಕಗಳಿಂದ ಕರ್ನಾಟಕ, ಆಂದ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು, ಪಂಜಾಬ್ ಸೇರಿದಂತೆ ಹಲವಾರು ರಾಜ್ಯಗಳು ನಿರಂತರವಾಗಿ ಹೋರಾಟಮಾಡುತ್ತಾ ಬಂದಿದ್ದಾರೆ, ಹಲವಾರು ವರ್ಷಗಳ ನಿರಂತರ ಹೋರಾಟದಫಲವಾಗಿ ಕರ್ನಾಟಕ ಸೇರಿದಂತೆ ಹಲವಾರು ರಾಜ್ಯಗಳು ಒಳಮೀಸಲಾತಿ ಜಾರಿಗೊಳಿಸಿದರೂ. ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಇದ್ದ ಕಾರಣ ಪೂರ್ಣಪ್ರಮಾಣದ ಮೀಸಲಾತಿ ಜಾರಿಯಾಗಿರಲ್ಲಿಲ್ಲ ಆದರೆ ಸರ್ವೋಚ್ಚ ನ್ಯಾಯಾಲಯದ 7 ಜನರ ನ್ಯಾಯಾಧೀಶರ ಪೂರ್ಣಪೀಠ, ಸಮಾಜದ ತುಳಿತಕೋಳಗಾದ ಜನಸಮುದಾಯಗಳಿಗೆ  ನ್ಯಾಯಸಮ್ಮತ ತೀರ್ಪು ನೀಡಿರುವುದು, ಸ್ವಾಗತಾರ್ಹವಾಗಿದೆ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮಾದಿಗ ದಂಡೋರ ತಾಲೂಕು ಅಧ್ಯಕ್ಷ ಕುಪ್ಪಾಳು ರಂಗಸ್ವಾಮಿ  ಮಾತನಾಡಿ, ಕರ್ನಾಟಕದಲ್ಲಿ ಅಸ್ಪೃಶ್ಯ ಸಮುದಾಯಗಳಿಗೆ ಸರ್ಕಾರದ ಮೀಸಲಾತಿ ಸವಲತ್ತು,ದೊರೆಯುತ್ತಿಲ್ಲ, ಮೀಸಲಾತಿ ಸವಲತ್ತುಗಳು ಸ್ಪೃಷ್ಯ ಪರಿಶಿಷ್ಟ ಜಾತಿಗಳ ಪಾಲಾಗುತ್ತಿದ್ದು, ಸರ್ವೋಚ್ಚನ್ಯಾಯಾಲಯ ನೀಡಿರುವ ತೀರ್ಪು ಶೋಷಿತ ಸಮುದಾಯಗಳಲ್ಲಿ ಹೊಸ ಆಶಾಭಾವನೆ ಮೂಡಿಸಿದೆ. ರಾಜ್ಯಸರ್ಕಾರ ಕೂಡಲೇ ಒಳಮೀಸಲಾತಿ ಜಾರಿಗೊಳಿಸುವ ಮೂಲಕ ಶೋಷಿತ ಸಮುದಾಯಗಳಿಗೆ ನ್ಯಾಯದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು.

    ಕಾರ್ಯಕ್ರಮದಲ್ಲಿ ಉಪಸ್ಥಿತರಿದ ಡಿಎಸ್ಎಸ್ ಜಿಲ್ಲಾ ಸಂಘಟನಾ ಸಂಚಾಲಕ ನಾಗ್ತೀಹಳ್ಳಿ ಕೃಷ್ಣಮೂರ್ತಿ ಮಾತನಾಡಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕರಾದ ಪ್ರೊಫೆಸರ್ ಬಿ.ಕೃಷ್ಣಪ್ಪ ನವರು ಹಚ್ಚಿದ ಒಳಮೀಸಲಾತಿ ಹೋರಾಟದ ಕಿಚ್ಚು ಸುಪ್ರೀಂ ಕೋರ್ಟ್ ಆದೇಶದಿಂದ ಫಲಕೊಡುವ ಕಾಲಬಂದಿದೆ. ಹಲವಾರು ವರ್ಷಗಳ ಮಾದಿಗ ಹಾಗೂ ದಲಿತಪರ ಸಂಘಟನೆಗಳ ನ್ಯಾಯಸಮ್ಮತ ಹೋರಾಟಕ್ಕೆ ಸಂದಜಯವಾಗಿದೆ, ಹೋರಾಟದಲ್ಲಿ ಭಾಗವಹಿಸಿ ಸಮುದಾಯಕ್ಕೆ ದಾರಿದೀಪವಾದ ಎಲ್ಲಾ ಸಮಾಜದ ನಾಯಕರಹೋರಾಟ ಅವಿಸ್ಮರಣೀಯವಾಗಿದ್ದು, ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗಳಲ್ಲಿಯೇ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ಮಾದಿಗ ಸಮುದಾಯಕ್ಕೆ ಹೆಚ್ಚಿನ ಒಳಮೀಸಲಾತಿ ಸೌಲಭ್ಯದೊರಯಬೇಕು ಎಂದು ಒತ್ತಾಯಿಸಿದರು.

    ಕಾರ್ಯಕ್ರಮದಲ್ಲಿ ಮುಖಂಡರಾದ ಪೆದ್ದಿಹಳ್ಳಿ ನರಸಿಂಹಯ್ಯ, ಡಿಎಸ್ಎಸ್ ಸಂಚಾಲಕ ಟಿ.ಕೆ ಕುಮಾರ್, ಗಾಂಧಿನಗರ ಬಸವರಾಜು,  ಬಿಳಿಗೆರೆ ಚಂದ್ರಶೇಖರ್, ಯಗಚಿಕಟ್ಟೆ ರಾಘವೇಂದ್ರ, ಲಿಂಗದೇವರು, ಜಗದಾರ್ಯ, ಅಶೋಕ್ ಗೌಡನಕಟ್ಟೆ, ಈಚನೂರು ಸೇಮಶೇಖರ್, ಕೊಪ್ಪ ಉದಯ್ ಕುಮಾರ್,  ಆನಂದ್ ಕುಮಾರ್, ರಮೇಶ್,  ಶಿವಕುಮಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶ್ರೀ ಗುರು ಸಿದ್ದೇಶ್ವರ ದೇವಸ್ಥಾನದ ಜೀರ್ಣೋದ್ದಾರಕ್ಕೆ 1 ಲಕ್ಷ ರೂ. ಧನಸಹಾಯ

    May 29, 2026

    ಪಕ್ಷದ ಜವಾಬ್ದಾರಿ ನಿರ್ವಹಿಸದಿದ್ದರೆ ಶಿಸ್ತು ಕ್ರಮ: ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಶಾಸಕ ಕೆ. ಷಡಕ್ಷರಿ ಎಚ್ಚರಿಕೆ

    May 23, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!

    June 1, 2026

    ಕೊರಟಗೆರೆ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಯುವಕರ ಮೇಲೆ ನಿಯಂತ್ರಣ ತಪ್ಪಿದ ಟಾಟಾ ಏಸ್ ವಾಹನವೊಂದು ಹರಿದ ಪರಿಣಾಮ,…

    ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ

    June 1, 2026

    ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

    June 1, 2026

    ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.