ತುಮಕೂರು: ಪರಿಶಿಷ್ಟ ಜಾತಿಗಳ (SC) ಒಳ ಮೀಸಲಾತಿ ಕುರಿತಾದ ದೀರ್ಘಕಾಲದ ವಿವಾದವನ್ನು ಬಗೆಹರಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಈ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 27ರಂದು ವಿಶೇಷ ಸಭೆ ಕರೆದಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಶನಿವಾರ ತಿಳಿಸಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಇರುವ ಗೊಂದಲ ಮತ್ತು ವಿವಾದಗಳಿಗೆ ಮಾರ್ಚ್ 27ರ ಸಭೆಯಲ್ಲಿ ಪರಿಹಾರ ಸಿಗುವ ಸಾಧ್ಯತೆಯಿದೆ.
ಮೀಸಲಾತಿ ಸಮಸ್ಯೆ ಬಗೆಹರಿದ ತಕ್ಷಣವೇ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭವಾಗಲಿದೆ.
ವಿಶೇಷವಾಗಿ ಪೊಲೀಸ್ ಇಲಾಖೆಯಲ್ಲಿ ಸುಮಾರು 8,000 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಈ ಸಭೆಯು ಒಳ ಮೀಸಲಾತಿ ಹೋರಾಟಗಾರರ ನಿರೀಕ್ಷೆಗಳನ್ನು ಪೂರೈಸುತ್ತದೆಯೇ ಮತ್ತು ನೇಮಕಾತಿ ಪ್ರಕ್ರಿಯೆಗೆ ವೇಗ ನೀಡುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


