nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ

    May 16, 2026

    ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು

    May 16, 2026

    ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!

    May 16, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ
    • ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು
    • ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!
    • ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ
    • ಮಧುಗಿರಿ:  ಮೇ ನಲ್ಲಿ 2 ತಿಂಗಳ ಪಡಿತರ ವಿತರಣೆ
    • ಸಿದ್ದರಾಮಯ್ಯ ಸರ್ಕಾರಕ್ಕೆ 3 ವರ್ಷ: ಮೇ 19ರಂದು ತುಮಕೂರಿನಲ್ಲಿ ಸಾಧನಾ ಸಮಾವೇಶ
    • ಕೆರೆಯ ಮಣ್ಣೆತ್ತಲು ರೈತರಿಗೆ ಅಡ್ಡಿಪಡಿಸುವಂತಿಲ್ಲ: ಜಿಲ್ಲಾಧಿಕಾರಿಗೆ ವಿ.ಸೋಮಣ್ಣ ಸೂಚನೆ
    • ಗುರು ಶಿಷ್ಯರು: ಈ ದಿನದ ಕಥೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಒಳಮೀಸಲಾತಿ:  ರಾಜ್ಯ ಸರ್ಕಾರ ಮಾದಿಗರ ತಾಳ್ಮೆ ಪರೀಕ್ಷಿಸುತ್ತಿದೆ: ಪಿ.ಎನ್.ರಾಮಯ್ಯ ಕಿಡಿ
    ತುಮಕೂರು March 30, 2026

    ಒಳಮೀಸಲಾತಿ:  ರಾಜ್ಯ ಸರ್ಕಾರ ಮಾದಿಗರ ತಾಳ್ಮೆ ಪರೀಕ್ಷಿಸುತ್ತಿದೆ: ಪಿ.ಎನ್.ರಾಮಯ್ಯ ಕಿಡಿ

    By adminMarch 30, 2026No Comments2 Mins Read
    madiga

    ತುಮಕೂರು: ರಾಜ್ಯ ಸರ್ಕಾರ ಮಾ.27 ರಂದು ಸಚಿವ ಸಂಪುಟದ ಸಭೆ ನಡೆಸಿ, ಒಳಮೀಸಲಾತಿಗೆ ಸಂಬಂಧಿಸಿದಂತೆ ಸುದೀರ್ಘ ಚರ್ಚೆ ನಡೆಸಿ, ಜಾರಿ ಮಾಡುವ ಭರವಸೆ ನೀಡಿತ್ತು. ಆದರೆ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನೆಪದಲ್ಲಿ ಸಭೆಯನ್ನು ಮುಂದೂಡುವ ಮೂಲಕ ಮಾದಿಗ ಸಮುದಾಯದ ತಾಳ್ಮೆ ಪರೀಕ್ಷಿಸುತ್ತಿದೆ ಎಂದು ದಸಂಸ ಜಿಲ್ಲಾಧ್ಯಕ್ಷ ಪಿ.ಎನ್. ರಾಮಯ್ಯ ಅವರು ಸರ್ಕಾರದ ವಿರುದ್ಧ ಕಿಡಿಕಾರಿದರು.

    ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೆ ತೋರಿಸಿರುವ ನಿರ್ಲಕ್ಷ್ಯವನ್ನು ಖಂಡಿಸಿ, ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಶನಿವಾರ ದಸಂಸ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ ಅವರ ಅಧ್ಯಕ್ಷತೆಯನ್ನು ನಗರದ ಎಂ.ಜಿ.ರಸ್ತೆಯ ಅಂಬೇಡ್ಕರ್ ಭವನದಲ್ಲಿ ಸಭೆ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ಅವರು, ಸುಪ್ರೀಂ ಕೋರ್ಟಿನ ಆದೇಶಕ್ಕೂ ಬೆಲೆ ಇಲ್ಲದಂತಾಗಿದೆ. ತಾವೇ ಬೊಕ್ಕಸದಿಂದ ನೂರಾರು ಕೋಟಿ ರೂ ಖರ್ಚು ಮಾಡಿ ಪಡೆದ ನ್ಯಾ.ನಾಗಮೋಹನದಾಸ್ ವರದಿಗೂ ಸರ್ಕಾರಕ್ಕೆ ನಂಬಿಕೆ ಇಲ್ಲದಂತಾಗಿದೆ. ವಿಧಾನಪರಿಷತ್ ಮತ್ತು ವಿಧಾನಸಭೆಯಲ್ಲಿ ಅಂಗೀಕಾರವಾಗಿ, ರಾಜ್ಯಪಾಲರ ಅಂಕಿತ ಬಿದ್ದರೂ ಒಳಮೀಸಲಾತಿ ಜಾರಿಗೆ ಕಂಟಕ ತಪ್ಪಿಲ್ಲ. ಹಾಗಾಗಿ ರಾಜ್ಯ ಸರ್ಕಾರಕ್ಕೆ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಮ್ ಹಾಗೂ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ಜಯಂತಿ ಆಚರಿಸುವ ಯಾವುದೇ ನೈತಿಕ ಹಕ್ಕು ಇಲ್ಲ ಎಂದರು.


    Provided by
    Provided by

    ಕಳೆದ ಮೂವತ್ತೈದು ವರ್ಷಗಳಿಂದ ಮಾದಿಗರ ಒಳಮೀಸಲಾತಿಗಾಗಿ ನಿರಂತರ ಹೋರಾಟ ಮಾಡುತ್ತಾ ಬಂದಿದ್ದರೂ ನಿರ್ಲಕ್ಷಿಸಿರುವ ಸರ್ಕಾರ, ಕೆಲ ಸಮುದಾಯಗಳ ಹೋರಾಟಕ್ಕೆ ಮಣಿದು ಒಳಮೀಸಲಾತಿ ಜಾರಿಯನ್ನು ಮುಂದೂಡುತ್ತಲೇ ಬಂದಿದೆ. ಕಾಂಗ್ರೆಸ್ ಪಕ್ಷದ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಗಾಂಧಿ, ರಾಹುಲ್‌ಗಾಂಧಿ ಅವರುಗಳಾಗಲಿ ಒಳಮೀಸಲಾತಿ ಪರ ಧ್ವನಿ ಎತ್ತಿಲ್ಲ. ಮುಂದಿನ ದಿನಗಳಲ್ಲಿ ಮಾದಿಗರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಪಿ.ಎನ್.ರಾಮಯ್ಯ ತಿಳಿಸಿದರು.

    ಸಭೆಯಲ್ಲಿ ಮಹಾಜನ್ ಪರಿವಾರದ ರಾಜ್ಯಧ್ಯಕ್ಷ ಹಂಚಿಹಳ್ಳಿ ರಾಮಸ್ವಾಮಿ, ಜೈ ಭೀಮ್ ಸೇವಾ ಸಮಿತಿಯ ಹಬ್ಬತ್ತನಹಳ್ಳಿ ಶ್ರೀನಿವಾಸ್, ದಲಿತ ವಿಮೋಚನಾ ಸೇನೆಯ ಸಂಚಾಲಕ ತಿಮ್ಮೇಗೌಡ, ಡಿಎಸ್‌ಎಸ್‌ ಯುವ ಘಟಕದ ಜಿಲ್ಲಾಧ್ಯಕ್ಷ ಸುನಿಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಣ್ಣ, ಎ.ನಾಗೇಶ್, ಮಂಜುನಾಥ್.ಪಿ, ಕರ್ನಾಟಕ ಮದಾರ ಮಹಾಸಭಾದ ಹೆಗ್ಗರೆ ನರಸಿಂಹರಾಜ್, ಎಸ್.ಸಿ.ಸಿದ್ದಯ್ಯ, ರಂಗನಾಥ್ ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು

    May 16, 2026

    ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!

    May 16, 2026

    ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ

    May 16, 2026

    Leave A Reply Cancel Reply

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ

    May 16, 2026

    ಮಧುಗಿರಿ: ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ವೀರಾಪುರ ಗ್ರಾಮದ ದಲಿತ ಛಲವಾದಿ ಸಮುದಾಯದವರು ತಮ್ಮ ಪೂರ್ವಿಕರ ಸಮಾಧಿಗಳ ಬಳಿ ಪೂಜಾ…

    ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು

    May 16, 2026

    ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!

    May 16, 2026

    ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ

    May 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.