ಬೆಂಗಳೂರು: ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಹಾಗೂ ಕರ್ನಾಟಕ ರಾಷ್ಟ್ರ ಸಮಿತಿ ವತಿಯಿಂದ ಡಿಸೆಂಬರ್ 9ರಂದು ಪೂರ್ವಾಹ್ನ 11 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ‘ಅಂತಾರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನ’ ಆಯೋಜಿಸಲಾಗಿದೆ.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ನಿವೃತ್ತ ಐಎಎಸ್ ಅಧಿಕಾರಿಗಳಾದ ವಿ. ಬಾಲಸುಬ್ರಮಣ್ಯನ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕೆ.ಆರ್.ಎಸ್. ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಅಧ್ಯಕ್ಷ ಬಿ.ಎಸ್.ಮಲ್ಲಿಕಾರ್ಜುನಯ್ಯ, ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಕಾರ್ಯದರ್ಶಿ ವಿ.ಆರ್.ಮರಾಠೆ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದಲ್ಲಿ ಸಮಾಜ ಪರಿವರ್ತನಾ ಸಮುದಾಯ ಧಾರವಾಡ ಇದರ ಎಸ್.ಎ.ಮಕ್ಕಾಭಿ, ತುಮಕೂರು ಜಿಲ್ಲಾ ಸಾಮಾಜಿಕ ಹೋರಾಟಗಾರ ಹಂದ್ರಾಳ್ ನಾಗಭೂಷಣ್, ಬೆಂಗಳೂರು ಜನಾಧಿಕಾರ ಸಂಘರ್ಷ ಪರಿಷತ್ ನ ಪ್ರಕಾಶ್ ಬಾಬು, ಚಾಮರಾಜನಗರ ಭ್ರಷ್ಟಾಚಾರ ವಿರೋಧಿ ಮತ್ತು ಸಾಮಾಜಿಕ ಹೋರಾಟಗಾರರಾದ ದೊರೆಸ್ವಾಮಿ, ಬೆಂಗಳೂರಿನ ನಿವೃತ್ತ ಸರ್ಕಾರಿ ನೌಕರ ಪಾಪೇಗೌಡ ಅವರನ್ನು ಸನ್ಮಾನಿಸಲಾಗುವುದು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz