ತುಮಕೂರು: ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ನವದೆಹಲಿ ಇವರಿಂದ 2026ನೇ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆಗೈದ ವ್ಯಕ್ತಿ/ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿ ನೀಡುವ ಸಲುವಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಇಚ್ಛಿಸುವವರು ಜುಲೈ 31ರೊಳಗಾಗಿ ವೆಬ್‌ಸೈಟ್ http://www.depwd.gov.in ಅಥವಾ http://www.awards.gov.in ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ, ಸ್ವೀಕೃತಿಯೊಂದಿಗೆ ಹಾರ್ಡ್ ಪ್ರತಿಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು ಇಲ್ಲಿಗೆ ಸಲ್ಲಿಸಬೇಕೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


