ಬೆಂಗಳೂರು: 2025 ಮಾರ್ಚ್ 1 ರಿಂದ 8 ರವರೆಗೆ ನಡೆಯಲಿರುವ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಧಿಕೃತ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಇಂದು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನಪರಿಷತ್ ಸದಸ್ಯ ನಸೀರ್ ಅಹ್ಮದ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಡಾ.ಪಿ.ಸಿ.ಜಾಫರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಬಿ.ಬಿ. ಕಾವೇರಿ, ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಡಾ.ಸಾಧು ಕೋಕಿಲ, ರಿಜಿಸ್ಟ್ರಾರ್ ಹಿಮಂತರಾಜು ಜಿ, ಕಲಾತ್ಮಕ ನಿರ್ದೇಶಕ ಎನ್. ವಿದ್ಯಾಶಂಕರ್ ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4