ತುಮಕೂರು: ಅಂತರ್ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸೆಪ್ಟೆಂಬರ್ 15ರಂದು ಸಮಾಜ ಕಲ್ಯಾಣ ಇಲಾಖೆಯು ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಸಂವಿಧಾನ ಪೀಠಿಕೆ ಬೋಧನೆ, 90 ಕಿಲೋ ಮೀಟರ್ ಮಾನವ ಸರಪಳಿಯನ್ನು ನಿರ್ಮಿಸಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಬಗ್ಗೆ ಹೆಚ್ಚು ಅರಿವು ಮೂಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮಾನವ ಸರಪಳಿಯನ್ನು ನಿರ್ಮಿಸಲಾಗುತ್ತಿದ್ದು, ಜಿಲ್ಲೆಯ ಶಿರಾ ತಾಲೂಕಿನ ತಾವರೆಕೆರೆ ಗ್ರಾಮ ಪಂಚಾಯಿತಿಯ ಉಜ್ಜನಕುಂಟೆ ಗ್ರಾಮದಿಂದ ತುಮಕೂರು ತಾಲೂಕಿನ ಹಿರೇಹಳ್ಳಿ ಗ್ರಾಮ ಪಂಚಾಯಿತಿಯ ನಂದಿಹಳ್ಳಿ ಗ್ರಾಮದವರೆಗೆ ಈ ಮಾನವ ಸರಪಳಿಯನ್ನು ನಿರ್ಮಿಸಲಾಗುವುದು ಎಂದರು.
ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮಾನವ ಸರಪಳಿಯನ್ನು ನಿರ್ಮಿಸಲಾಗುತ್ತಿದ್ದು ಜಿಲ್ಲೆಯ ಜನತೆ, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು, ಅಧಿಕಾರಿಗಳು, ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದರು.
ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು, ವಿವಿಧ ಸಂಘ–ಸಂಸ್ಥೆಗಳು ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q