ಪಾವಗಡ: ಪಟ್ಟಣದ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ 12ನೇ ಯೋಗ ದಿನಾಚರಣೆಯನ್ನು ಭಾನುವಾರದಂದು ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಕಾರ್ಯದರ್ಶಿ ಡಾ.ಜಿ. ವೆಂಕಟರಾಮಯ್ಯ ಅವರು ವಹಿಸಿದ್ದರು. ಈ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳಿಗೆ ಯೋಗದ ಮಹತ್ವದ ಕುರಿತು ಮಾತುಗಳನ್ನಾಡಿ, “ನಿತ್ಯ ಯೋಗದಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಏಕಾಗ್ರತೆ ಹಾಗೂ ಶಿಸ್ತು ರೂಢಿಸಿಕೊಳ್ಳಲು ಯೋಗ ಅತ್ಯುತ್ತಮ ಸಾಧನ” ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ನಾಗೇಂದ್ರ, ಎಲ್ಲಾ ವಿಭಾಗದ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳು ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿ ಗಮನ ಸೆಳೆದರು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಯೋಗದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಯಿತು.
ವರದಿ: ನಂದೀಶ್ ನಾಯ್ಕ ಪಿ. ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC




