ಬೀದರ್: ನಗರದ ನ್ಯೂ ಆದರ್ಶ ಕಾಲೋನಿಯಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 1 ಲಕ್ಷ ರೂ. ಅಧಿಕ ಮೌಲ್ಯದ ನಶೆ ಏರಿಸುವ ನಾರ್ಕೋಟಿಕ್ ಔಷಧಿ ಹಾಗೂ ಮಾತ್ರೆಗಳನ್ನು ಬೀದರ್ ಪೊಲೀಸರು ಕಾರ್ಯಾಚರಣೆ ಮಾಡಿ ಜಪ್ತಿ ಮಾಡಿದ ಘಟನೆ ನಡೆದಿದೆ.
ನಾರ್ಕೋಟಿಕ್ ಔಷಧಿ ಹಾಗೂ ಮಾತ್ರೆಗಳನ್ನು ಮನೆಯಲ್ಲಿ ಅಕ್ರಮವಾಗಿ ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದರು. ಖಚಿತ ಮಾಹಿತಿ ಮೇರೆಗೆ ಮನೆ ಮೇಲೆ ದಾಳಿ ಮಾಡಿದ ಪೊಲೀಸರು, ನಶೆ ಭರಿಸುವ ಲಕ್ಷಾಂತರ ಮೌಲ್ಯದ ಡ್ರಗ್ಸ್ ಹಾಗೂ ಮೂರು ಜನ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈ ಕುರಿತು ಬೀದರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


