ವರ್ಗಾವಣೆಗೆ ಶಾಸಕರ ಭವನ, ಕುಮಾರಕೃಪಾ ಸುತ್ತಮುತ್ತ ಜನಜಂಗುಳಿ, ಹಪ್ತಾ ವಸೂಲಿಗೆ ಮೇಲಾಧಿಕಾರಿಗಳಿಂದ ಒತ್ತಡ ಹೆಚ್ಚಾಗಿ ಪೇದೆ ಆತ್ಮಹತ್ಯೆಗೆ ಯತ್ನ ರಾಜ್ಯ ಸರ್ಕಾರದ ಭ್ರಷ್ಟಾಚಾರದ ಪರಿಯನ್ನು ಮಾಜಿ ಬಸವರಾಜ ಬೊಮ್ಮಾಯಿ ಬಿಚ್ಚಿಟ್ಟ ಪರಿ ಇದು.
ಭ್ರಷ್ಟಾಚಾರ ಪ್ರಕರಣಗಳ ತನಿಖೆ ನಡೆಸಬೇಕೆಂದರೆ 2013 ರಿಂದ 2023 ರ ವರೆಗಿನ ಎಲ್ಲ ಪ್ರಕರಣಗಳ ತನಿಖೆ ನಡೆಸಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭ್ರಷ್ಟಾಚಾರ ನಿಯಂತ್ರಣಕ್ಕೆ ಲೋಕಾಯುಕ್ತ ಇರುವಾಗ ಅದನ್ನು ನಿಷ್ಕ್ರಿಯಗೊಳಿಸಿ ಎಸಿಬಿ ರಚನೆ ಮಾಡಿದ್ದರು. ಭ್ರಷ್ಟಾಚಾರದಿಂದ ರಕ್ಷಣೆ ಪಡೆಯಲು ಎಸಿಬಿ ರಚನೆ ಮಾಡಿದ್ದರು ಅಂತ ಕೋರ್ಟ್ ಆದೇಶದಲ್ಲಿಯೇ ಇದೆ ಎಂದು ಹೇಳಿದರು.
ಭ್ರಷ್ಟಾಚಾರ ನಿಯಂತ್ರಣ ಮಾಡಲು 2013 ರಿಂದ 2023 ರ ವರೆಗಿನ ಎಲ್ಲ ಪ್ರಕರಣಗಳ ತನಿಖೆ ನಡೆಸಿ, ಈ ಸಮಯದಲ್ಲಿ ನಡೆದ ಹಗರಣಗಳ ಬಗ್ಗೆ ಯಾರೇ ದೂರು ಕೊಟ್ಟರೂ ತನಿಖೆ ನಡೆಸಿ, ಹಲವಾರು ಸಂದರ್ಭದಲ್ಲಿ ನ್ಯಾಯಾಂಗ ಆಯೋಗದ ತನಿಖೆಗಳನ್ನು ನೋಡಿದ್ದೇವೆ. ಮುಕ್ತವಾದ ಸತ್ಯ ಹೊರಬೇಕೆಂದರೆ ನಮ್ಮ ಕಾಲದ ನಿಮ್ಮ ಕಾಲದ ಎರಡೂ ಹಗರಣ ಹೊರ ಬರಲಿ ಎಂದು ಆಗ್ರಹಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


