ತುಮಕೂರು: ಕೃಷಿ ಇಲಾಖೆ ವತಿಯಿಂದ ಕೃಷಿಯಲ್ಲಿ ವಿಶೇಷ ಸಾಧನೆ ಮಾಡಿದ ರೈತರು ಮತ್ತು ರೈತ ಮಹಿಳೆಯರನ್ನು ಗುರುತಿಸಿ 2026–27ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿಯನ್ನು ನೀಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪ್ರಶಸ್ತಿಗೆ ಅರ್ಜಿ ಸಲ್ಲಿಸಲಿಚ್ಛಿಸುವ ರೈತರು ಕೆ–ಕಿಸಾನ್ ಪೋರ್ಟಲ್ನಲ್ಲಿ RSK ಲಾಗಿನ್ ಅಥವಾ Citizen ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ನಾಗರಿಕ ಸೇವಾ ಕೇಂದ್ರ ಅಥವಾ ಸ್ವತಃ ರೈತರು ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ FID ಸಂಖ್ಯೆಯನ್ನು ಬಳಸಿಕೊಂಡು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಕೃಷಿ ಪಂಡಿತ ಪ್ರಶಸ್ತಿಗೆ ಪುರುಷರು ಮತ್ತು ಮಹಿಳೆಯರ ವಿಭಾಗದಡಿ ಪ್ರತ್ಯೇಕವಾಗಿ ನೋಂದಣಿ ಮಾಡಲು ಅವಕಾಶವಿರುತ್ತದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನಾಂಕವಾಗಿದ್ದು, ರೈತರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


