ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024–25ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಹೆಚ್.ಡಿ. ಅಧ್ಯಯನ ಪ್ರಾರಂಭಿಸಿರುವ(ದಿನಾಂಕ: 10.01.2024 ಮತ್ತು ಅದರ ನಂತರ ಪ್ರಥಮ ವರ್ಷದ ಪಿ.ಹೆಚ್.ಡಿ. ಪ್ರಾರಂಭಿಸಿರಬೇಕು) ಅಭ್ಯರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ–1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕದ ಶಾಸನಬದ್ದ ವಿಶ್ವ ವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿ.ಹೆಚ್.ಡಿ. ಅಧ್ಯಯನ ಮಾಡುತ್ತಿರುವ ಹೊಸ ಅಭ್ಯರ್ಥಿಗಳು ಮಾತ್ರ ಆಫ್–ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಜನವರಿ 20 ಕಡೆಯ ದಿನವಾಗಿದ್ದು, ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ತುಮಕೂರು ಅಥವಾ ಇಲಾಖಾ ವೆಬ್ ಸೈಟ್ https://bcwd.karnataka.gov.in ಅಥವಾ ದೂ.ವಾ.ಸಂ. 080–8050770004/ 0816–2955528ನ್ನು ಸಂಪರ್ಕಿಸಬಹುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx