ತುಮಕೂರು: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಎಸ್.ಎಸ್.ಎಲ್.ಸಿ. ನಂತರ ಉನ್ನತ ಶಿಕ್ಷಣ, ವೃತ್ತಿ ಶಿಕ್ಷಣ, ತಾಂತ್ರಿಕ ಶಿಕ್ಷಣ, ಸ್ನಾತಕೋತ್ತರ, ಔದ್ಯೋಗಿಕ ಶಿಕ್ಷಣಗಳಿಗೆ ನಿಯಮಾನುಸಾರ ಆಯ್ಕೆಯಾಗುವ ವಿಕಲಚೇತನ ವಿದ್ಯಾರ್ಥಿಗಳಿಗೆ ಸರ್ಕಾರವು ನಿಗದಿಪಡಿಸಿರುವ ಪರೀಕ್ಷಾ ಶುಲ್ಕ, ಬೋಧನಾ ಶುಲ್ಕ, ಪ್ರಯೋಗಾಲಯ ಶುಲ್ಕ ಹಾಗೂ ಗ್ರಂಥಾಲಯ ಶುಲ್ಕ ಮರುಪಾವತಿ ಯೋಜನೆಯಡಿ ಪೋಸ್ಟ್ ಮೆಟ್ರಿಕ್ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ(ಎಂ.ಆರ್.ಡಬ್ಲ್ಯೂ), ನಗರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರ ಪುನರ್ವಸತಿ (ಯುಆರ್ಡಬ್ಲ್ಯೂ) ಕಾರ್ಯಕರ್ತರನ್ನು ಅಥವಾ ಇಲಾಖೆಯ ದೂರವಾಣಿ ಸಂಖ್ಯೆ: 0816-2270029 / 2005053ನ್ನು ಸಂಪರ್ಕಿಸಬಹುದಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


