ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ — 2024ರಲ್ಲಿ ಲಲಿತಕಲೆ ಮತ್ತು ಕರಕುಶಲ ಉಪಸಮಿತಿ ವತಿಯಿಂದ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು, ಸಿದ್ಧಾರ್ಥನಗರ, ಮೈಸೂರು ಸಂಸ್ಥೆಯ ಆವರಣದಲ್ಲಿ 04—10–2024 ರಿಂದ 07—10–2024 ರವರೆಗೆ ನಡೆಯುವ ರಾಜ್ಯ ಮಟ್ಟದ ದಸರಾ ಕಲಾ ಪ್ರದರ್ಶನಕ್ಕೆ ಕಲಾಕೃತಿಗಳನ್ನು ಆಹ್ವಾನಿಸಲಾಗಿದೆ.
ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ, ಛಾಯಚಿತ್ರ, ಅನ್ವಯ ಕಲೆ ವಿಭಾಗಗಳಲ್ಲಿ ವೃತ್ತಿಪರ ಹಾಗೂ ಹವ್ಯಾಸಿ ವಿಭಾಗಗಳಿರುತ್ತದೆ. ಸಾಂಪ್ರದಾಯಿಕ ಚಿತ್ರಕಲೆ, ಸಾಂಪ್ರದಾಯಿಕ ಶಿಲ್ಪಕಲೆ, ಕರಕುಶಲ ಕಲೆ / ಇನ್ಲೇ ವಿಭಾಗಗಳಲ್ಲಿ ಹವ್ಯಾಸಿ ವಿಭಾಗವಿರುವುದಿಲ್ಲ. ಎಲ್ಲಾ ವಿಭಾಗಗಳಲ್ಲಿ ಅತ್ಯುತ್ತಮ ಮೂರು ಕಲಾಕೃತಿಗಳಿಗೆ ಬಹುಮಾನಗಳನ್ನು ನೀಡಲಾಗುವುದು.
ಕಲಾಕೃತಿಗಳನ್ನು 30—09–2024 ರೊಳಗೆ ಬೆಳಗ್ಗೆ 10:30ರಿಂದ ಸಂಜೆ 5:30ರವರೆಗೆ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) , ಸಿದ್ಧಾರ್ಥನಗರ, ಮೈಸೂರು – 570011, ಸಂಸ್ಥೆಯ ಕಛೇರಿ ಅವಧಿಯಲ್ಲಿ ಸಲ್ಲಿಸುವುದು. ಕಲಾಕೃತಿಗಳನ್ನು ಸಲ್ಲಿಸುವ ಕಲಾವಿದರು ಸಂಪೂರ್ಣ ವಿವರವನ್ನು ಸ್ವಯಂ ದೃಢೀಕರಣದೊಂದಿಗೆ ಉಪಸಮಿತಿಗೆ ತಲುಪಿಸುವುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q