ತುಮಕೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಯುವಜನ ಮೇಳ ಹಾಗೂ ಯುವಜನೋತ್ಸವ ಕಾರ್ಯಕ್ರಮಗಳಲ್ಲಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳನ್ನು ಭಾಗವಹಿಸಲು ಉತ್ತೇಜಿಸುವ ನಿಟ್ಟಿನಲ್ಲಿ ಆಯೋಜಿಸಿರುವ ಕಲಾ ಪ್ರಕಾರಗಳ ಜಾನಪದ ತರಬೇತಿ ಶಿಬಿರಕ್ಕೆ ಪರಿಶಿಷ್ಟ ಜಾತಿ ಯುವಜನರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತ ಯುವಜನರು ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 18ರೊಳಗಾಗಿ ನಿಗದಿತ ನಮೂನೆಯೊಂದಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ.9741691379ನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx