ಬೆಂಗಳೂರು: ತುಮಕೂರು ಜಿಲ್ಲಾಡಳಿತ ನಿಯೋಗವು ಇಂದು (ಅಕ್ಟೋಬರ್ 2) ಬೆಳಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ ಮಾನ್ಯ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ ಅವರ ನಿವಾಸಕ್ಕೆ ಭೇಟಿ ನೀಡಿತು.
ಅಕ್ಟೋಬರ್ 3ರಂದು ನಡೆಯುವ ‘ತುಮಕೂರು ದಸರಾ–2024’ ಉದ್ಘಾಟನೆಗೆ ಆಹ್ವಾನಿಸಿ, ಸಚಿವರಾದ ಡಾ. ಜಿ.ಪರಮೇಶ್ವರ, ಕನ್ನಿಕಾ ಪರಮೇಶ್ವರಿ ಅವರಿಗೆ ಆಮಂತ್ರಣ ನೀಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾಪಂಚಾಯತ್ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ವೆಂಕಟ್, ಅರಣ್ಯಾಧಿಕಾರಿ ಅನುಪಮಾ, ತಹಶೀಲ್ದಾರ್ ರಾಜೇಶ್ವರಿ ಅವರು ಇದ್ದರು.
25 ಲಕ್ಷ ದೇಣಿಗೆ ನೀಡಿದ ಪರಮೇಶ್ವರ್!
ತುಮಕೂರು ನಗರದಲ್ಲಿ ಅದ್ಧೂರಿಯಾಗಿ ಜರುಗಲಿರುವ ‘ತುಮಕೂರು ದಸರಾ ಉತ್ಸವ-2024’ ಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವೈಯಕ್ತಿಕವಾಗಿ 25 ಲಕ್ಷ ರೂ. ಮೊತ್ತದ ದೇಣಿಗೆಯ ಚೆಕ್ ಅನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಪ್ರಭು, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜಾ, ಅಪರ ಜಿಲ್ಲಾಧಿಕಾರಿ ಡಾ.ತಿಪ್ಪೇಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ವೆಂಕಟ್ ಅವರು ಇದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296