ತುಮಕೂರು: ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಡಿಸೆಂಬರ್ 2ರಂದು ಮುಖ್ಯಮಂತ್ರಿಗಳಿಂದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ/ಉದ್ಘಾಟನೆ ಮತ್ತು ಸವಲತ್ತು ವಿತರಣಾ ಕಾರ್ಯಕ್ರಮಕ್ಕೆ ಆಗಮಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಶುಕ್ರವಾರ ಮಠಕ್ಕೆ ಭೇಟಿ ನೀಡಿ ಶ್ರೀ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳಿಗೆ ಆಹ್ವಾನ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx