ಬೆಂಗಳೂರು ನಗರ: ಕರ್ನಾಟಕ ಸಾಹಿತ್ಯ ಅಕಾಡೆಮಿಯು, ಕರ್ನಾಟಕ ಸಂಭ್ರಮ–50ರ ಅಭಿಯಾನದ ಅಂಗವಾಗಿ ಬೆಂಗಳೂರು, ಮೈಸೂರು, ಬೆಳಿಗಾವಿ ಹಾಗೂ ಕಲಬುರಗಿ ವಿಭಾಗಗಳಲ್ಲಿ ವಿಭಾಗವಾರು “ಯುವಕವಿ ಗೋಷ್ಠಿ” ಗಳನ್ನು ಆಯೋಜಿಸುತ್ತಿದ್ದು, ಆಸಕ್ತ 20 ರಿಂದ 40 ವರ್ಷ ವಯಸ್ಸಿನ ಯುವಕವಿಗಳಿಂದ ಕವಿತೆಗಳನ್ನು ಆಹ್ವಾನಿಸಲಾಗಿದೆ.
ರಾಜ್ಯದ ಎಲ್ಲಾ ಭಾಗದ ಆಸಕ್ತ ಯುವ ಕವಿಗಳು ಅಕ್ಟೋಬರ್ 30 ರೊಳಗೆ ಕನಿಷ್ಠರ 3 ಕವಿತೆಗಳನ್ನು ಕಳುಹಿಸಿಕೊಡಬಹುದಾಗಿದೆ.
ಕವಿಗಳು ಕವಿತೆಗಳನ್ನು ಸಲ್ಲಿಸಲು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಜಾಲತಾಣ http://karnatakasahithyaacademy.org ನಿಂದ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಕನ್ನಡ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ ರಸ್ತೆ, ಬೆಂಗಳೂರು-560 002 ಅಥವಾ ದೂರವಾಣಿ ಸಂಖ್ಯೆ 080–2221 1730 / 2210 6460, 29601730 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಕರ್ನಾಟಕ ಸಾಹಿತ್ಯ ಅಕಾಡಮಿ ರಿಜಿಸ್ಟ್ರಾರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296