ಐಪಿಎಲ್ 2024ರ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕೋಲ್ಕತ್ತಾ ನೈಟ್ ರೈಡರ್ಸ್, ಇಂದು ತವರು ನೆಲ ಈಡನ್ ಗಾರ್ಡನ್ ನಲ್ಲಿ ನಡೆದ 60ನೇ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿ ಅಧಿಕೃತವಾಗಿ ಪ್ಲೇಆಫ್ ಗೆ ಎಂಟ್ರಿಕೊಟ್ಟಿದೆ.
ಮಳೆ ಪೀಡಿತ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ಮುಂಬೈ ಇಂಡಿಯನ್ಸ್ ಗೆ ಗೆಲ್ಲಲು 158 ರನ್‌ಗಳ ಗುರಿಯನ್ನು ನೀಡಿದೆ. ಮಳೆಯಿಂದಾಗಿ ಪಂದ್ಯ ಎರಡು ಗಂಟೆ 15 ನಿಮಿಷ ತಡವಾಗಿ ಆರಂಭಗೊಂಡಿದ್ದು, ಓವರ್ ಗಳನ್ನು ಮೊಟಕುಗೊಳಿಸಲಾಯಿತು. ಪಂದ್ಯವನ್ನು ತಲಾ 16 ಓವರ್ ಆಡಿಸಲು ನಿರ್ಧರಿಸಲಾಯಿತು.
ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 20 ಓವರ್ ಗಳಲ್ಲಿ ಏಳು ವಿಕೆಟ್ ಗೆ 157 ರನ್ ಗಳಿಸಿತು. ಕೆಕೆಆರ್ ಪರ ವೆಂಕಟೇಶ್ ಅಯ್ಯರ್ 21 ಎಸೆತಗಳಲ್ಲಿ 6 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 42 ರನ್ ಗಳಿಸಿದರು. ಮುಂಬೈ ಪರ ವೇಗಿ ಜಸ್ಪ್ರೀತ್ ಬುಮ್ರಾ ಮತ್ತು ಅನುಭವಿ ಸ್ಪಿನ್ನರ್ ಅಮಿತ್ ಮಿಶ್ರಾ ತಲಾ ಎರಡು ವಿಕೆಟ್ ಪಡೆದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296