ಇಂದು ಚೆನ್ನೈನ ಎಂಎ ಚಿದಂಬರಂ(ಚೆಪಾಕ್) ಸ್ಟೇಡಿಯಂನಲ್ಲಿ KKR vs SRH ನಡುವೆ ಫೈನಲ್ ಪಂದ್ಯ ನಡೆಯಲಿದೆ. ಅಂತಿಮ ಹಣಾಹಣಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಸನ್ ರೈಸರ್ಸ್ ಹೈದಾರಾಬಾದ್(SRH) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದೊಂದಿಗೆ ಐಪಿಎಲ್ ಸೀಸನ್ 17 ಗೆ ತೆರೆ ಬೀಳಲಿದೆ. ವಿಶೇಷ ಎಂದರೆ ಕೊಲ್ಕತ್ತಾ ನೈಟ್ ರೈಡರ್ಸ್ ಈವರೆಗೆ 2 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ಇದೀಗ ಮೂರನೇ ಸಲ ಕಪ್ ಎತ್ತಿ ಹಿಡಿಯುವ ವಿಶ್ವಾಸದಲ್ಲಿದೆ.
ಅತ್ತ ಹೈದರಾಬಾದ್ ಫ್ರಾಂಚೈಸಿ ಕೂಡ ಈಗಾಗಲೇ 2 ಸಲ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಇದೀಗ ಮೂರನೇ ಬಾರಿ ಟ್ರೋಫಿ ಗೆಲ್ಲುವ ಇರಾದೆಯಲ್ಲಿದೆ. ಇಂದೇ ಅರ್ಜಿ ಸಲ್ಲಿಸಿ. . ಇನ್ನು ಉಭಯ ತಂಡಗಳು ಈವರೆಗೆ 27 ಬಾರಿ ಮುಖಾಮುಖಿಯಾಗಿದ್ದು, ಈ ವೇಳೆ ಕೆಕೆಆರ್ ತಂಡ 18 ಬಾರಿ ಜಯ ಸಾಧಿಸಿದರೆ, ಎಸ್ ಆರ್ ಹೆಚ್ ತಂಡ ಗೆದ್ದಿರುವುದು ಕೇವಲ 9 ಬಾರಿ ಮಾತ್ರ. ಅದರಲ್ಲೂ ಈ ಸಲ ಆಡಲಾದ ಎರಡೂ ಪಂದ್ಯಗಳಲ್ಲೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಗೆಲುವು ಸಾಧಿಸಿದೆ. ಅಂದರೆ ಎಸ್ ಆರ್ ಹೆಚ್ ವಿರುದ್ಧ ಕೆಕೆಆರ್ ಮೇಲುಗೈ ಹೊಂದಿರುವುದು ಸ್ಪಷ್ಟ. ಇದಾಗ್ಯೂ ಅಂತಿಮ ಪಂದ್ಯದಲ್ಲಿ ಎಸ್ ಆರ್ ಹೆಚ್ ಕಡೆಯಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


