ತುಮಕೂರು: ಜಿಲ್ಲಾ ಮೀನುಗಾರಿಕೆ ಇಲಾಖೆಯು ತಿಪಟೂರು ತಾಲೂಕು ನೋಣವಿನಕೆರೆ ಗ್ರಾಮ ಕೆರೆ ಅಂಚಿನ ಮೀನು ಕೃಷಿ ಕೊಳದ ಬಳಿ ಜುಲೈ 10ರಂದು ಬೆಳಿಗ್ಗೆ 10 ಗಂಟೆಗೆ ಆಮೀನು ಕೃಷಿಕರ ದಿನಾಚರಣೆಯನ್ನು ಆಚರಿಸಲಿದೆ.
ದಿನಾಚರಣೆ ಕಾರ್ಯಕ್ರಮದಲ್ಲಿ ಮೀನುಮರಿ ಪಾಲನಾ ಚಟುವಟಿಕೆ, ಮೀನುಗಾರಿಕೆಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಮೀನು ಕೃಷಿ ಬಗ್ಗೆ ಮಾಹಿತಿ ನೀಡಲಾಗುವುದು.
ಜಿಲ್ಲೆಯ ಎಲ್ಲಾ ತಾಲೂಕುಗಳ ಮೀನುಗಾರರು, ಮೀನು ಕೃಷಿಕರು ಮತ್ತು ಸಂಪನ್ಮೂಲ ವ್ಯಕ್ತಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದಿನಾಚರಣೆಯನ್ನು ಯಶಸ್ವಿಗೊಳಿಸಬೇಕೆಂದು ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


