ಎಪ್ರಿಲ್ 13ರಂದು ಹಾರ್ಮುಜ್ ಜಲಸಂಧಿಯ ಬಳಿ ಇರಾನ್ ವಶಕ್ಕೆ ಪಡೆದಿದ್ದ, ಪೋರ್ಚುಗೀಸ್ ಧ್ವಜ ಹೊಂದಿದ್ದ ಹಡಗಿನಲ್ಲಿದ್ದ 25 ಸಿಬ್ಬಂದಿಗಳಲ್ಲಿ 7 ಸಿಬ್ಬಂದಿಗಳನ್ನು ಬಿಡುಗಡೆಗೊಳಿಸಿದ್ದು, ಇವರಲ್ಲಿ ಐವರು ಭಾರತೀಯರು ಸೇರಿದ್ದಾರೆ ಎಂದು ಪೋರ್ಚುಗಲ್ ನ ವಿದೇಶಾಂಗ ಇಲಾಖೆ ತಿಳಿಸಿದೆ. ಬಿಡುಗಡೆಗೊಂಡವರಲ್ಲಿ ಐವರು ಭಾರತೀಯರು, ಓರ್ವ ಫಿಲಿಪ್ಪೀನ್ಸ್ ಹಾಗೂ ಓರ್ವ ಎಸ್ಟೋನಿಯಾ ಪ್ರಜೆಗಳು ಸೇರಿದ್ದಾರೆ. ಪೋರ್ಚುಗೀಸ್ ಧ್ವಜ ಹೊಂದಿರುವ ಎಂಎಸ್ ಸಿ ಏರೀಸ್ ಹಡಗನ್ನು ಎಪ್ರಿಲ್ 13ರಂದು ಇರಾನ್ ನ ರೆವೊಲ್ಯುಷನರಿ ಗಾಡ್ರ್ಸ್ ವಶಕ್ಕೆ ಪಡೆದಿತ್ತು.
ಕಂಟೈನರ್ ಹಡಗು ಇಸ್ರೇಲ್ ಜತೆ ಸಂಪರ್ಕ ಹೊಂದಿತ್ತು ಎಂದು ಇರಾನ್ ವಿದೇಶಾಂಗ ಇಲಾಖೆ ತಿಳಿಸಿತ್ತು. ಇರಾನ್ ನ ಕ್ರಮವನ್ನು ಸ್ವಾಗತಿಸಿರುವ ಪೋರ್ಚುಗಲ್, ಉಳಿದ 17 ಸಿಬ್ಬಂದಿಗಳನ್ನು ತಕ್ಷಣ ಬಿಡುಗಡೆಗೊಳಿಸುವಂತೆ ಆಗ್ರಹಿಸಿದೆ. ಹಡಗಿನ ಎಲ್ಲಾ ಸಿಬ್ಬಂದಿಗಳನ್ನೂ ಮಾನವೀಯ ನೆಲೆಯಲ್ಲಿ ಬಿಡುಗಡೆಗೊಳಿಸಲಾಗುವುದು. ಆದರೆ ಜಫ್ತಿ ಮಾಡಿರುವ ಹಡಗನ್ನು ಬಿಡುಗಡೆಗೊಳಿಸುವುದಿಲ್ಲ ಎಂದು ಇರಾನ್ ವಿದೇಶಾಂಗ ಸಚಿವರು ಕಳೆದ ವಾರ ಹೇಳಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296