ಬೆಂಗಳೂರು: ರಾಜ್ಯದಲ್ಲಿ ಬಸ್ ಪ್ರಯಾಣಿಕರಿಗೆ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದೆ. ಬಸ್ ಟಿಕೆಟ್ ದರ ಏರಿಕೆ ವಿಚಾರವಾಗಿ ಸಾರಿಗೆ ಸಚಿವ ಬೈರತಿ ಸುರೇಶ್ ಸುಳಿವು ನೀಡಿದ್ದು, ನಿವೃತ್ತ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದ ಸಮಿತಿಯ ವರದಿ ಶೀಘ್ರದಲ್ಲೇ ಸಲ್ಲಿಕೆಯಾಗಲಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕೇಂದ್ರ ಸರ್ಕಾರವು ನಾಲ್ಕು ಬಾರಿ ಡೀಸೆಲ್ ದರವನ್ನು ಏರಿಕೆ ಮಾಡಿದೆ. ಇದರಿಂದ ಸಾರಿಗೆ ನಿಗಮಗಳ ಮೇಲೆ ಆರ್ಥಿಕ ಹೊರೆ ಹೆಚ್ಚಾಗಿದ್ದು, ಸದ್ಯ ಬಸ್ ಟಿಕೆಟ್ ದರವನ್ನು ಏರಿಸುವುದು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.
ಬಸ್ ಟಿಕೆಟ್ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ವರದಿ ಸಿದ್ಧಪಡಿಸಲು ಸೂಚಿಸಲಾಗಿದ್ದು, ಅದರಂತೆ ಗುರುವಾರ ಅಥವಾ ಶುಕ್ರವಾರದೊಳಗೆ ಅತುಲ್ ತಿವಾರಿ ನೇತೃತ್ವದ ಸಮಿತಿಯು ವರದಿ ಸಲ್ಲಿಸಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ವರದಿ ಕೈ ಸೇರಿದ ಬಳಿಕ ಅದನ್ನು ಪರಿಶೀಲಿಸಿ, ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ, ಸಂಪುಟ ಸಭೆಯಲ್ಲಿ (Cabinet) ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ದಸರಾ ಒಳಗೆ ದರ ಏರಿಕೆಯಾಗುತ್ತಾ?
ದಸರಾ ಹಬ್ಬದ ಒಳಗೆ ಬಸ್ ದರ ಹೆಚ್ಚಳವಾಗಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೈರತಿ ಸುರೇಶ್, “ದಸರಾ ಒಳಗೆ ಆಗುತ್ತದೋ ಇಲ್ಲವೋ ಎಂಬುದು ಈಗಲೇ ಹೇಳಲುಸಾಧ್ಯವಿಲ್ಲ. ಮೊದಲು ವರದಿ ಸಲ್ಲಿಕೆಯಾಗಲಿ. ವರದಿಯಲ್ಲಿ ಏನೇನಿದೆ ಎಂಬುದನ್ನು ಪರಿಶೀಲಿಸಿ, ಸಿಎಂ ಜೊತೆ ಚರ್ಚಿಸಿದ ಬಳಿಕವೇ ನಿರ್ಧಾರ ಕೈಗೊಳ್ಳಲಾಗುವುದು” ಎಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
