ಚುನಾವಣಾ ಬಾಂಡ್ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಧ್ಯಮಗಳು ವಿಶ್ಲೇಷಿಸುತ್ತಿರುವ ಚುನಾವಣಾ ಆಯೋಗ ಪ್ರಕಟಿಸಿರುವ ಮಾಹಿತಿ ನೋಡಿದರೆ ಕೇಂದ್ರ ಸರ್ಕಾರ ಉದ್ಯಮಿಗಳ ಬ್ಲಾಕ್ ಮೇಲ್ ಮಾಡುತ್ತಿರುವಂತೆ ಕಾಣುತ್ತಿದೆ. ಉದ್ಯಮಿಗಳ ಮೇಲೆ ನಡೆದಿರುವ ಐಟಿ, ಇಡಿ, ಸಿಬಿಐ ದಾಳಿ ದಿನಾಂಕ ಮತ್ತು ಉದ್ಯಮಿಗಳು ಚುನಾವಣಾ ಬಾಂಡ್ ಖರೀದಿ ದಿನಾಂಕ ನೋಡಿದರೆ ಇದೊಂದು ಪಕ್ಕಾ ಬ್ಲಾಕ್ ಮೇಲ್ ರೀತಿ ಕಾಣುತ್ತಿದೆ ಎಂದರು.
ಮೋದಿಯವರೇ ಕನಿಷ್ಠ ಚುನಾವಣಾ ಬಾಂಡ್ ಹಗರಣದ ಬಗ್ಗೆಯಾದರೂ ಉತ್ತರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸ್ವಿಸ್ ಬ್ಯಾಂಕ್ ನಲ್ಲಿರುವ ಕಪ್ಪು ಹಣ ತಂದು ಜನರಿಗೆ ಹಂಚುತ್ತೇವೆ, ನೋಟ್ ಬ್ಯಾನ್ ಮಾಡಿ ಕಪ್ಪುಹಣದ ಮೂಲೋತ್ಪಾಟನೆ ಮಾಡುತ್ತೇವೆ, ನಾ ಖಾವೂಂಗಾ – ನಾ ಖಾನೆ ದೂಂಗಾ, ದೇಶದ ಸಂಪತ್ತಿಗೆಲ್ಲ ನಾನೇ ಚೌಕಿದಾರ ಎಂದೆಲ್ಲ ಹೇಳಿ ಹತ್ತು ವರ್ಷಗಳಿಂದ ಅಧಿಕಾರದಲ್ಲಿರುವ ಮೋದಿಯವರೇ ಕನಿಷ್ಠ ಚುನಾವಣಾ ಬಾಂಡ್ ಹಗರಣದ ಬಗ್ಗೆಯಾದರೂ ಉತ್ತರಿಸಿ ಎಂದರು.
ಜಗತ್ತಿನ ಅತ್ಯಂತ ದೊಡ್ಡ ಭ್ರಷ್ಟಾಚಾರ ಹಗರಣವಾಗಿ ಹೊರಹೊಮ್ಮುತ್ತಿರುವ ಚುನಾವಣಾ ಬಾಂಡ್ ಸುಲಿಗೆ ಬಗ್ಗೆ ಭಾರತೀಯ ಜನತಾ ಪಕ್ಷ ಯಾಕೆ ಮೌನವಾಗಿದೆ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


