ಬಳ್ಳಾರಿ : ಕಾರಿನಲ್ಲಿ ಬಂದ ದುಷ್ಕರ್ಮಿಗಳ ಗ್ಯಾಂಗ್ ಬೆಳಗ್ಗೆ ವಾಕಿಂಗ್ ಹೋಗುತ್ತಿದ್ದ ವೈದ್ಯರೊಬ್ಬರನ್ನು ಅಪಹರಣ ಮಾಡಿರುವ ಘಟನೆ ನಡೆದಿದೆ.
ಬಳ್ಳಾರಿ ಜಿಲ್ಲಾಸ್ಪತ್ರೆಯ ಖ್ಯಾತ ಮಕ್ಕಳ ವೈದ್ಯ ಡಾ. ಸುನೀಲ್ ಅಪಹರಣಕ್ಕೊಳಗಾದವರಾಗಿದ್ದಾರೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳ ಗ್ಯಾಂಗ್ ಬೆಳಗ್ಗೆ ವಾಕಿಂಗ್ ಹೋಗುತ್ತಿದ್ದ ವೈದ್ಯ ಡಾ. ಸುನೀಲ್ ಅವರ ಬಾಯಿಗೆ ಬಟ್ಟೆ ತುರುಕಿ ಅಪಹರಿಸಿದ್ದಾರೆ.
ಈ ಘಟನೆ ನಗರದ ಸತ್ಯನಾರಾಯಣ ಪೇಟೆ ಬಳಿ ನಡೆದಿದೆ. ಅಪಹರಣದ ಬಳಿಕ ಸುನೀಲ್ ಮೊಬೈಲ್ನಿಂದಲೇ ಅವರ ತಮ್ಮ, ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷ ವೇಣುಗೋಪಾಲ್ ಗುಪ್ತ ಅವರಿಗೆ ಕರೆ ಮಾಡಿರುವ ಅಪಹರಣಕಾರರು 3 ಕೋಟಿಯಷ್ಟು ಹಣ ಮತ್ತು ಚಿನ್ನ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx