ಬಿಗ್ ಬಾಸ್ ಖ್ಯಾತಿಯ ಇಶಾನಿ, ನಟ ದರ್ಶನ್ ಹುಟ್ಟು ಹಬ್ಬಕ್ಕೆ ಸ್ಪೆಷಲ್ ಗಿಫ್ಟ್ ನೀಡಲಿದ್ದು, ದರ್ಶನ್ ಅವರ ಹುಟ್ಟುಹಬ್ಬದ ದಿನದಂದು ಇಶಾನಿ ಅವರು ದರ್ಶನ್ ಕುರಿತಾದ ವಿಶೇಷವಾದ ಹಾಡೊಂದನ್ನು ರಿಲೀಸ್ ಮಾಡಲಿದ್ದಾರಂತೆ. ಈಗಾಗಲೇ ಹಾಡಿಗಾಗಿ ಸರ್ವ ರೀತಿಯಲ್ಲಿ ಅವರೂ ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ದರ್ಶನ್ ತಮ್ಮ ಹುಟ್ಟು ಹಬ್ಬವನ್ನು ಫೆಬ್ರವರಿ 16ರಂದು ಆಚರಿಸಿಕೊಳ್ಳಲಿದ್ದು, ಈಗಾಗಲೇ ಅಭಿಮಾನಿಗಳಿಗೆ ದರ್ಶನ್ ಸಂದೇಶವೊಂದನ್ನು ರವಾನಿಸಿದ್ದು, “ಯಾರೂ ಕೇಕ್ ಮತ್ತು ಬ್ಯಾನರ್ ಕಟ್ಟದಂತೆ ಹೇಳಿದ್ದಾರೆ. ಜೊತೆಗೆ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ದವಸ ಧಾನ್ಯಗಳನ್ನು ಉಡುಗೊರೆಯಾಗಿ ನೀಡಿ” ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.


