ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕ್ಲೀನ್ ಚಿಟ್ ಪಡೆದ ಬೆನ್ನಲ್ಲೆ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದ ಶಾಸಕ ಕೆ.ಎಸ್ ಈಶ್ವರಪ್ಪ ಬಳಿಕ ನಿನ್ನೆ ಸಿಎಂ ಭೇಟಿಯಾಗಿ ಮಂತ್ರಿ ಸ್ಥಾನ ಬೇಡ ಎಂದಿದ್ದರು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ.ಟಿ ರವಿ, ಕೆ.ಎಸ್ ಈಶ್ವರಪ್ಪರಿಗೆ ಸಚಿವ ಸ್ಥಾನ ಕೊಡಬೇಕಿತ್ತು. ಪಕ್ಷಕಟ್ಟಿದ ಹಿರಿಯ ನಾಯಕರಲ್ಲಿ ಈಶ್ವರಪ್ಪ ಅವರು ಒಬ್ಬರು. ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು. ತನಿಖೆಯಲ್ಲಿ ಅವರ ಪಾತ್ರ ಇಲ್ಲವೆಂದು ಸಾಬೀತು ಆಗಿದೆ. ಹೀಗಾಗಿ ಸಚಿವ ಸ್ಥಾನ ನೀಡಬೇಕಿತ್ತು. ಈಗ ಸಚಿವ ಸ್ಥಾನ ಕೇಳೋದು ತಪ್ಪಲ್ಲ ಎಂದರು.
ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಸಿ.ಟಿ ರವಿ, ಮೀಸಲಾತಿ ಹೆಚ್ಚಳ ಮಾಡುತ್ತೇವೆಂದು ದಲಿತರಿಗೆ ಮೋಸ ಮಾಡಿದ್ದರು. ಈಗ ಎಸ್.ಸಿ ಎಸ್ ಟಿ ಮೀಸಲಾತಿ ಹೆಚ್ಚಿಸಿದ್ದು ಬಿಜೆಪಿ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಇದು ಬಹಿರಂಗ ಸತ್ಯ ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


