ಬೈರೂತ್: ಲೆಬನಾನ್ ನ ಬೈರೂತ್ ಮೇಲೆ ಇಸ್ರೇಲ್ ಬಾಂಬ್ ದಾಳಿ ನಡೆಸಿದ್ದು 6 ಜನರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಗುರುವಾರ ಬೆಳಗ್ಗಿನ ಜಾವ ಈ ದಾಳಿ ನಡೆದಿದೆ.
ಬೈರೂತ್ನ ಬಚೌರ ಪ್ರದೇಶದಲ್ಲಿರುವ ಸಂಸತ್ತಿನ ಸಮೀಪದಲ್ಲಿರುವ ಕಟ್ಟಡಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ನಡೆಸಿದೆ ಎಂದು ಲೆಬನಾನ್ ಭದ್ರತಾ ಪಡೆ ತಿಳಿಸಿದೆ.
ಗುರುವಾರ ಬೆಳಗ್ಗಿನ ಜಾವ ಭಾರೀ ಶಬ್ದ ಕೇಳಿ ಬಂದಿರುವುದಾಗಿ ಪ್ರತ್ಯಕ್ಷದರ್ಶಿಗಳು ರಾಯಿಟರ್ಸ್‌ಗೆ ತಿಳಿಸಿದ್ದಾರೆ. ದಾಳಿಯಲ್ಲಿ ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
ಇದರ ಜತೆಗೆ ಲೆಬನಾನ್ ನ ದಕ್ಷಿಣದಲ್ಲಿರುವ ಉಪನಗರ ದಹಿಯೆಹ್ ಮೇಲೂ ಮೂರು ಕ್ಷಿಪಣಿಗಳು ದಾಳಿ ನಡೆಸಿವೆ. ಈ ಜಾಗದಲ್ಲಿ ಕಳೆದ ವಾರ ಹಿಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಅವರನ್ನು ಹತ್ಯೆ ಮಾಡಲಾಗಿತ್ತು.
ಇಸ್ರೇಲ್ ದಾಳಿಗೆ ಪ್ರತಿಯಾಗಿ ಇರಾನ್ 180ಕ್ಕೂ ಹೆಚ್ಚು ಕ್ಷಿಪಣಿಗಳನ್ನು ಬುಧವಾರ ಇಸ್ರೇಲ್ ನತ್ತ ಹಾರಿಸಿತ್ತು. ಪರಿಣಾಮ ಇಸ್ರೇಲ್ ನ 8 ಸೈನಿಕರು ಮೃತಪಟ್ಟಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296