ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಮಹತ್ವಾಕಾಂಕ್ಷೆಯ ಚಂದ್ರಯಾನ-3 ಉಡಾವಣೆ ಯಶಸ್ವಿಯಾಯಿತು. ಇಸ್ರೋ ಸಾಧನೆಗೆ ದೇಶದ ಅನೇಕ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ಚಂದ್ರಯಾನ-3 ಯಶಸ್ವಿ ಉಡಾವಣೆಯಿಂದ ಇಸ್ರೋ ವಿಜ್ಞಾನಿಗಳಲ್ಲಿ ಸಂಭ್ರಮ ಮನೆ ಮಾಡಿತ್ತು. ಇಸ್ರೋ ವಿಜ್ಞಾನಿಗಳ ಪರಿಶ್ರಮ ಮತ್ತು ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
ಭಾರತವು ಇಂದು ಚಂದ್ರಯಾನ-3 ರ ಯಶಸ್ವಿ ಉಡಾವಣೆಯೊಂದಿಗೆ ತನ್ನ ಐತಿಹಾಸಿಕ ಬಾಹ್ಯಾಕಾಶ ಪ್ರಯಾಣವನ್ನು ಆರಂಭಿಸಿದೆ. ಇಸ್ರೋ ವಿಜ್ಞಾನಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಅವರ ದಣಿವರಿಯದ ಅನ್ವೇಷಣೆಯು ಭಾರತದ ಮುಂದಿನ ತಲೆಮಾರುಗಳಿಗೆ ಪ್ರೇರಕ ಶಕ್ತಿಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ಶಾಟ್ವೀಟ್ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ, ಚಂದ್ರಯಾನ-3 ಮಿಷನ್ ಯಶಸ್ವಿ ಉಡಾವಣೆಗಾಗಿ ಇಸ್ರೋಗೆ ಅಭಿನಂದನೆಗಳು. ಇದು ಭಾರತಕ್ಕೆ ಹೆಮ್ಮೆಯ ಕ್ಷಣ ಮತ್ತು ಭಾರತದ ಬಾಹ್ಯಾಕಾಶ ಸಂಶೋಧನೆ ಮತ್ತು ನಾವೀನ್ಯತೆಯಲ್ಲಿ ಹೊಸ ಮೈಲಿಗಲ್ಲು. ಈ ಸಾಧನೆಯು ಭಾರತದ ಯುವ ಮನಸ್ಸುಗಳನ್ನು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಮಾಡಲು ಪ್ರೇರೇಪಿಸುತ್ತದೆ ಎಂದು ಅಭಿನಂದಿಸಿದ್ದಾರೆ.ಇನ್ನೂ ಹಲವರು ಅಭಿನಂದಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


